ಬೆಳ್ತಂಗಡಿ: ಸೆ.5ರಂದು ನಡೆಯುವ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಜಿಲ್ಲಾ ಮಟ್ಟದಲ್ಲಿ ಕೊಡ ಮಾಡುವ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನಿಂದ 9 ಶಿಕ್ಷಕರ ಹೆಸರು ರವಾನೆಯಾಗಿ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ.


ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮುಂಡ್ರುಪ್ಪಾಡಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಚಿತ್ರಪ್ರಭಾ, ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಅಂಡೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೃಷ್ಣಪ್ಪ ಪೂಜಾರಿ ಹಾಗೂ ಪ್ರೌಢಶಾಲಾ ವಿಭಾಗದಿಂದ ವೇಣೂರು ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕ ರವೀಂದ್ರ ಕೆ. ಅವರು ಆಯ್ಕೆಯಾಗಿದ್ದಾರೆ.
ಈ ಬಾರಿ ಮಂಗಳೂರಿನಲ್ಲಿ ಸೆ.5 ರಂದು ನಡೆಯಲಿರುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ .



