ಬೆಂಗಳೂರು, ಏ. 4: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ, ಉತ್ತರ ಕನ್ಡ, ಶಿವಮೊಗ್ಗ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.





