ಜಿಲ್ಲೆಯಲ್ಲಿ 71 ಜನರಿಗೆ ಕೋವಿಡ್ ಸೋಂಕು ದೃಢ: ಸೋಂಕಿತರ ಸಂಖ್ಯೆ 1284 ಕ್ಕೆ ಏರಿಕೆ

 

ಚಿತ್ರದುರ್ಗ, ಆ.12:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ ಮತ್ತೆ 71 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1284 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 86 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 09, ಹೊಳಲ್ಕೆರೆ-18, ಹಿರಿಯೂರು-10, ಚಳ್ಳಕೆರೆ-11, ಹೊಸದುರ್ಗ-13, ಮೊಳಕಾಲ್ಮುರು ತಾಲ್ಲೂಕಿನಲ್ಲಿ 09 ಹಾಗೂ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ 01 ಸೇರಿದಂತೆ ಒಟ್ಟು 71 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಬುಧವಾರ ಒಟ್ಟು 1094 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವರದಿಯಲ್ಲಿ 71 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 1284 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 18 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 663 ಜನರು ಗುಣಮುಖರಾಗಿ ಬಿಡುಗಡೆಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 602 ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 414 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 7999 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 26,335 ಜನರ ಮಾದರಿ ಸಂಗ್ರಹಿಸಲಾಗಿದ್ದು, 21,370 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 3381 ಜನರ ವರದಿ ಬರುವುದು ಬಾಕಿ ಇದೆ. 300 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours