ಶಾಲೆಯ ಕೊಠಡಿಗಳಿಗೆ ಶಾಸಕ ಗೂಳಿಹಟ್ಟಿ ಶೇಖರ್ ಭೂಮಿ ಪೂಜೆ

 

 

 

 

ಹೊಸದುರ್ಗ ತಾಲೂಕಿನ ಶ್ರೀರಾಂಪುರ ಹೋಬಳಿಯ ಓಬಳಾಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಶಾಲಾ ಕೊಠಡಿಗಳಿಗೆ ಶಾಸಕ ಗೂಳಿಹಟ್ಟಿ ಶೇಖರ್ ಬುಧವಾರ ಭೂಮಿಪೂಜೆ ನೆರವೇರಿಸಿದರು.

 

 

ನಂತರ ಮಾತನಾಡಿದ ಅವರು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡದೆ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಕೋಡಿಹಳ್ಳಿಗೆ 2 ಶಾಲೆ ಮತ್ತು ಸೂಜಿಕಲ್ ಹಾಗೂ ಓಬಳಾಪುರ ಗ್ರಾಮಗಳಿಗೆ ತಲಾ 1 ಸರ್ಕಾರಿ ಶಾಲೆಗಳನ್ನು ನಬಾರ್ಡ್ ಯೋಜನೆಯಡಿ ತಲಾ 11 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುವುದು ಎಂದು ಗೂಳಿಹಟ್ಟಿ ಶೇಖರ್‌ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪಿ.ಲಿಂಗರಾಜು, ವಾಲ್ಮೀಕಿ ರವಿಕುಮಾರ್ ಇದ್ದರು.

[t4b-ticker]

You May Also Like

More From Author

+ There are no comments

Add yours