ನಾಳೆ ವಿಶ್ವ ವಿಕಲಚೇತನರ ದಿನಾಚರಣೆ

 

ಚಿತ್ರದುರ್ಗ ಡಿ. 02 (ಕರ್ನಾಟಕ ವಾರ್ತೆ) :
ಜಿಲ್ಲಾಡಳಿತ, ಜಿ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿವಿದೋದ್ದೇಶ/ನಗರ/ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಇವರ ಸಹಯೋಗದೊಂದಿಗೆ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಡಿ. 03 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕರುವಿನಕಟ್ಟೆ ಸರ್ಕಲ್ ಬಳಿಯ ಸದ್ಗುರು ಕಬೀರಾನಂದಾಶ್ರಮ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವರು ಹಾಗೂ ಚಿತ್ರದುರ್ಗ ಸಂಸದರಾದ ಎ.ನಾರಾಯಣ ಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ಜರುಗುವ ಈ ಸಮಾರಂಭದಲ್ಲಿ ಸಾರಿಗೆ ಹಾಗೂ ಪ.ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಗೌರವಾನ್ವಿತ ಆಹ್ವಾನಿತರಾಗಿ ಪಾಲ್ಗೊಳ್ಳುವರು.  ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಸಮಾರಂಭ ಉದ್ಘಾಟಿಸುವರು.  ವಿಧಾನಪರಿಷತ್ ಮುಖ್ಯ ಸಚೇತಕ ಡಾ. ವೈ.ಎ. ನಾರಯಣಸ್ವಾಮಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.  ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಶಾಸಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ, ಶಾಸಕರು ಹಾಗೂ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೂಳಿಹಟ್ಟಿ ಡಿ. ಶೇಖರ್, ಶಾಸಕರಾದ ಟಿ. ರಘುಮೂರ್ತಿ, ಪೂರ್ಣಿಮಾ ಕೆ. ಶ್ರೀನಿವಾಸ್, ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಜಿ.ಟಿ. ಸುರೇಶ್, ನಗರಸಭೆ ಅಧ್ಯಕ್ಷೆ ಬಿ. ತಿಪ್ಪಮ್ಮ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಜಿ.ಪಂ. ಸಿಇಒ ಎಂ.ಎಸ್. ದಿವಾಕರ್, ಎಸ್‍ಪಿ ಕೆ. ಪರಶುರಾಮ್ ಮುಂತಾದವರು ಸಮಾರಂಭದಲ್ಲಿ ಭಾಗವಹಿಸುವರು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ. ವೈಶಾಲಿ ತಿಳಿಸಿದ್ದಾರೆ

[t4b-ticker]

You May Also Like

More From Author

+ There are no comments

Add yours