ವೇಣೂರು: ಇಲ್ಲಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ 2025-26ನೇ ವರ್ಷದ ಮಹಾಸಭೆಯು ಸೆ. 20ರಂದು ಬೆಳಿಗ್ಗೆ 10-00 ಗಂಟೆಯಿಂದ ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ. ಅವರು ವಹಿಸಲಿದ್ದು, ಸಭೆಯಲ್ಲಿ ಸಂಘದ ಅಧ್ಯಕ್ಷರ ಆಶಯದಂತೆ ಪ್ರತಿಭಾ ಪುರಸ್ಕಾರ ಸೇರಿದಂತೆ ಹಲವು ಸಾಮಾಜಿಕ ಸೇವಾ ಚಟುವಟಿಕೆ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂರ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





