ತುಂತುರ ನೀರಾವರಿ ಘಟಕಗಳ ಉಪಯೋಗ ಮತ್ತು ನಿರ್ವಹಣೆ ಕುರಿತು ತರಬೇತಿ

 

ಚಿತ್ರದುರ್ಗ:ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಫೆ.22ರಂದು ಬೆಳಿಗ್ಗೆ 10ಕ್ಕೆ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿ ಮತ್ತು ಜವನಗೊಂಡನಹಳ್ಳಿ ಹೋಬಳಿಯ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ಮತ್ತು ತುಂತುರ ನೀರಾವರಿ ಘಟಕಗಳ ಉಪಯೋಗ ಮತ್ತು ನಿರ್ವಹಣೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಜೈನ್ ಇರಿಗೇಷನ್‍ನ ದೇವರಾಜ ಅವರು ನೀರಿನ ಸಮರ್ಥ ಬಳಕೆ, ಹನಿ ನೀರಾವರಿ ಮತ್ತು ಸ್ಪ್ರೀಂಕ್ಲರ್ ಘಟಕಗಳ ಉಪಯೋಗ ಮತ್ತು ಅವುಗಳ ನಿರ್ವಹಣೆಯ ಕುರಿತು ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ನೀಡುವರು.

ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿ ಮತ್ತು ಜವನಗೊಂಡನಹಳ್ಳಿ ಹೋಬಳಿಯ ಆಸಕ್ತ 60 ಜನ ರೈತರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.
ತರಬೇತಿ ನೋಂದಣಿಗಾಗಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ-8277931058, ಕೃಷಿ ಅಧಿಕಾರಿ ಟಿ.ಪಿ.ರಂಜಿತಾ-8277930959,  ಕೃಷಿ ಅಧಿಕಾರಿ ಸಿಕಂದರ್ ಬಾಷಾ-8277931058 ಮತ್ತು ಎಂ.ಜೆ.ಪವಿತ್ರಾ-9535412286 ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.
ಮೊದಲು ನೋಂದಾವಣಿ ಮಾಡಿಕೊಂಡ 60 ಜನ ರೈತರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.


[t4b-ticker]

You May Also Like

More From Author

+ There are no comments

Add yours