ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ

 

ಬೆಂಗಳೂರು, ಜುಲೈ 10: ಕರ್ನಾಟಕ ರಾಜ್ಯ ಸರ್ಕಾರ ತನ್ನ ವ್ಯಾಪ್ತಿಯ ಆಯುಕ್ತರು, ನಿರ್ದೇಶಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಹಲವು ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೇರೆಡೆ ವರ್ಗಾವಣೆಗೊಳಿಸಿ ಆದೇಶ ಸೋಮವಾರ ಹೊರಡಿಸಿದೆ.

ಆಯುಷ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಮಂಜುನಾಥ್ ಜೆ ಅವರನ್ನು ಸರ್ವೆ ಸೆಟ್ಲ್‌ಮೆಂಟ್ ಮತ್ತು ಲ್ಯಾಂಡ್ ರೆಕಾರ್ಡ್ಸ್ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ.

ಇವರು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದ್ದು, ಮುದಿನ ಆದೇಶದವರೆಗೆ ಇದೇ ಸ್ಥಾನದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

 

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ನಿರ್ದೇಶಕರಾದ ಸತ್ಯಭಾಮಾ ಸಿ ಅವರನ್ನು ಈಗಿನಿಂದಲೇ ಜಾರಿಗೆ ಬರುವಂತೆ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ. ಸದ್ಯ ತೆರವಾದ ಅವರ ಸ್ಥಾನ ಖಾಲಿ ಇದೆ ಎಂದು ಸರ್ಕಾತ ಆದೇಶದಲ್ಲಿ ತಿಳಿಸಿದೆ.

 

ಗ್ರಾಮೀಣಾಭಿವೃದ್ಧಿ ಆಯುಕ್ತರಾದ ಶಿಲ್ಪಾ ನಾಗ್ ಸಿಟಿ ಅವರನ್ನು ಮುಂದಿನ ಆದೇಶದವರೆಗೆ ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ. ಅವರು ಡಿಸಿ ಆಗಿ ಸ್ಥಾನ ಅಲಂಕರಿಸುವವರೆಗೆ ಅಲ್ಲಿ ಪೂವಿತಾ ಎಸ್. ಅವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ.

ಇನ್ನು ಭೂಬಾಲನ್ ಟಿ. ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಜಯಪುರ ಜಿಲ್ಲೆಯ ಉಪ ಆಯುಕ್ತರಾಗಿ ನಿಯೋಜಿಸಲಾಗಿದೆ. ಅಲ್ಲದೇ ಇದೇ ಜಿಲ್ಲಾ ಪಂಚಾಯತ್ ನ ವಿಜಯಮಹಾಂತೇಶ ಬಿ. ದಾನಮ್ಮನವರ್ ಅವರನ್ನು ಸಹ ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.

 

ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾದ ದರ್ಶನ್ ಎಚ್.ವಿ. ಅವರನ್ನು ಐಟಿ ಮತ್ತು ಬಿಟಿ ನಿರ್ದೇಶಕರಾಗಿ ನಿಯೋಜಿಸಲಾಗಿದೆ. ಅವರ ವರ್ಗಾವಣೆ ನಂತರ ಖಾಲಿ ಉಳಿದ ಆ ಸ್ಥಾನವು ಮುಂದಿನ ಆದೇಶದವರೆಗೆ ಯಥಾ ಸ್ಥಿತಿಯಲ್ಲಿರಲಿದೆ.

ಹುದ್ದೆಗಾಗಿ ಕಾಯುತ್ತಿದ್ದ ಅಧಿಕಾರಿ ಡಾ. ಅನುರಾಧಾ ಕೆ.ಎನ್. ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆಗಿ ವರ್ಗಾವಣೆ ಮಾಡಲಾಗಿದೆ. ಇನ್ನೂ ಅಲ್ಲಿನ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ವರ್ನಿತ್ ನೇಗಿ ಅವರನ್ನು ಸಹ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ (KUIDFC) ಜಂಟಿ ವ್ಯವಸ್ಥಾಪಕ ನಿರ್ದೇಶಕ ಪದ್ಮಾ ಬಸವಂತಪ್ಪ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ವರ್ನಿತ್ ನೇಗಿ ಅವರನ್ನು ಮುಂದಿನ ಆದೇಶವರೆಗೆ ಕೊಡಗು ಜಿಲ್ಲೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನಲ್ಲಿ ಆ ಸ್ಥಾನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಆಕಾಶ್ ಎಸ್ ಅವರನ್ನು ಸಹ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

[t4b-ticker]

You May Also Like

More From Author

+ There are no comments

Add yours