ಮಂಗಳೂರು, ಸೆ.18: ಕರ್ನಾಟಕದಲ್ಲಿ ತುಳು ಭಾಷೆ ಸ್ಥಾನಮಾನಕ್ಕಾಗಿ ಕಳೆದ ಹಲವು ದಶಕಗಳಿಂದ ಹೋರಾಟ ನಡೆದಿದೆ. ಕೊನೆಗೂ ತುಳು ಭಾಷೆಗೆ ಸ್ಥಾನ ಮಾನ ಸಿಕ್ಕಿದೆ. ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಮಾಡಲು ಇಂದು (ಸೆ.18) ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಈ ಘೋಷಣೆ ಮಾಡಿದ್ದು, ಇನ್ನು ಮುಂದೆ ತುಳು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಹೊರಹೊಮ್ಮಲಿದೆ. ಇನ್ನು ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತಿದ್ದಂತೆಯೇ ಮಂಗಳೂರಿಗರ ಸಂಭ್ರಮ ಮನೆ ಮಾಡಿದೆ. ಈ ಸಂಭ್ರಮದಲ್ಲಿ ಶಾಸಕ ಅಶೋಕ್ ರೈ ಅವರು ತುಳು ಧ್ವಜ ಹಿಡಿದ ಕುಣಿದು ಕುಪ್ಪಳಿಸಿ ಗಮನಸೆಳೆದಿದ್ದಾರೆ.





