ಚಿತ್ರದುರ್ಗ:ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ,(Turvanur) ತರವನೂರು ಗ್ರಾಮ ಪಂಚಾಯಿತಿ, ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಹಾಗೂ ಸಹಯೋಗದಲ್ಲಿ ಗುರುವಾರ ಬಾಲ್ಯ ವಿವಾಹದ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿ ಹಾಗೂ ಬಾಲ್ಯ ವಿವಾಹ ಕುರಿತಾದ ಕರ ಪತ್ರ ಹಂಚುವುದರೊಂದಿಗೆ ಬಾಲ್ಯ ವಿವಾಹ ತಡೆ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ (Turvanur) ಬೋಧಿಸಲಾಯಿತು. ಪೊಲೀಸ್ ಇಲಾಖೆ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮಕ್ಕಳಿಗೆ ಬಾಲ್ಯ ವಿವಾಹ ನಿಷೇಧ ಕಾನೂನು, ಪೋಕ್ಸೋ ಕಾನೂನು ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷದೀಪಾ, ಉಪಾಧ್ಯಕ್ಷ ಆರ್.ತಿಪ್ಪೇಸ್ವಾಮಿ, ಗ್ರಾ.ಪಂ.ಸದಸ್ಯ ಡಿ.ಆರ್.ಮಂಜುನಾಥ್,(Turvanur) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೀತಾ, ಪಿಡಿಓ ಖಲೀಂ, ಪ್ರೌಢಶಾಲೆ ಮುಖ್ಯೋಪದ್ಯಾಯರು ಹಾಗೂ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸೇರಿದಂತೆ ಮತ್ತಿರರು ಇದ್ದರು
[t4b-ticker]
+ There are no comments
Add yours