ಉಡುಪಿ: ಚಲಿಸುತ್ತಿದ್ದ ಖಾಸಗಿ ಬಸ್ ಒಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲಿ ಬಸ್ ಸಂಪೂರ್ಣವಾಗಿ ಬೆಂಕಿಗೆಾಹುತಿಯಾದ ಭೀಕರ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ನಡೆದಿದೆ. ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಈ ಅನಾಹುತ ಸಂಭವಿಸಿದ್ದು, ಸಕಾಲದಲ್ಲಿ ಎಚ್ಚೆತ್ತುಕೊಂಡಿದ್ದರಿಂದ ಬಸ್ಸಿನಲ್ಲಿದ್ದ 7 ಜನ ಪ್ರಯಾಣಿಕರು ದೊಡ್ಡ ದುರಂತದಿಂದ ಪಾರಾಗಿದ್ದಾರೆ.


ಜಿಲ್ಲೆಯ ಬ್ರಹ್ಮಾವರ ಸಮೀಪ ಖಾಸಗಿ ಬಸ್ಸೊಂದು ನೋಡನೋಡುತ್ತಿದ್ದಂತೆ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಡಿಸಿ ಬಾಕ್ಸ್ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿದ ನಿರ್ವಾಹಕರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ಸಿಬ್ಬಂದಿಯವರು ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.



