ಗುಣಮಟ್ಟದ ಶಿಕ್ಷಣದಿಂದ ಕಡಿಮೆಯಾಗಲಿದೆ ನಿರುದ್ಯೋಗ: ಡಾ.ಸಿ.ಬಿ.ಪ್ರೇಮಪಲ್ಲವಿ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.30:
ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವುದರಿಂದ ನಿರುದ್ಯೋಗದ ಸಮಸ್ಯೆ ಕಡಿಮೆಯಾಗಲಿದೆ ಎಂದು ಸರ್ಕಾರಿ ಕಲಾ ಕಾಲೇಜು ಸ್ನಾತಕೋತ್ತರ ಕನ್ನಡ ವಿಭಾಗದ ಸಹಪ್ರಾಧ್ಯಾಪಕಿ ಡಾ.ಸಿ.ಬಿ.ಪ್ರೇಮ ಪಲ್ಲವಿ ಅಭಿಪ್ರಾಯಪಟ್ಟರು.
ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ ಕಾಲೇಜು ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾನಿಲಯ, ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ಅಂತಿಮ ವರ್ಷದ ಬಿ.ಎ ಮತ್ತು ಬಿ.ಕಾಂ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾದರೆ ನಿರುದ್ಯೋಗದ ಸಮಸ್ಯೆಯೂ ಹೆಚ್ಚಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಶ್ನೆ ಮಾಡುವ ಮನೋಭಾವದ ಜೊತೆಗೆ ಮತ್ತು ಸೃಜನಾಶೀಲತೆ ಬೆಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸಮಾಜವನ್ನು ಬದಲಾವಣೆ ಮಾಡುವ ಶಕ್ತಿ ಯುವ ಜನತೆಗೆ ಇದೆ. ವಿದ್ಯಾರ್ಥಿಗಳು ಹೊಸ ಮನುಷ್ಯರಾಗಿ ಹೊಸತನದಿಂದ ಬದುಕಬೇಕು. ವಿದ್ಯಾರ್ಥಿಗಳಿಗೆ ಕೇಳಿಸಿಕೊಳ್ಳುವ ಆಸಕ್ತಿ ಇರಬೇಕು. ಯಾರು ಜ್ಞಾನ ಹೊಂದಿರುತ್ತಾರೋ ಅವರು ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ. ಹಾಗಾಗಿ ಜ್ಞಾನ ಗಳಿಸುವ ಪ್ರಯತ್ನ ಮಾಡಬೇಕು ಎಂದರು.
ಯುವ ಜನತೆಯು ಯೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳವ ಶಕ್ತಿ ಹೊಂದಿರಬೇಕು. ಪ್ಯಾಷನ್, ಮೋಜು, ಮಸ್ತಿ ಎಂದು ಯುವ ಪೀಳಿಗೆಯು ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ. ಯಾವ ವಿದ್ಯಾರ್ಥಿ ಚರಿತ್ರೆ, ಪುರಾಣ, ಸಂಸ್ಕøತಿ ತಿಳಿದುಕೊಂಡಿರುತ್ತಾರೊ ಅವರು ಮಾತ್ರ ಒಳ್ಳೆಯ ವಿದ್ಯಾರ್ಥಿಯಾಗಲು ಸಾಧ್ಯ ಎಂದು ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶಪಾಲ ಡಾ. ಗುಡ್ಡದೇಶ್ವರಪ್ಪ ಮಾತನಾಡಿ, ಮಹಿಳೆಯರು ಉನ್ನತ ಸ್ಥಾನ ಪಡೆಯಬೇಕು. ನಾವು ಎಷ್ಟು ದಿನ ಬದುಕಿದ್ದೇವೆ ಎಂಬುವುದು ಮುಖ್ಯವಲ್ಲ ಏನು ಸಾಧನೆ ಮಾಡಿದ್ದೇವೆ ಎಂಬುವುದು ಮುಖ್ಯ. ಹೆಚ್ಚು ಹೆಚ್ಚು ಅಧ್ಯಯನ ಮಾಡಿ ಹೆಚ್ಚಿನ ಜ್ಞಾನ ಸಂಪಾದಿಸಬೇಕು. ಸಮಾಜಕ್ಕೆ ಹೊರೆಯಾಗದೆ ಆಧಾರ ಸ್ತಂಭವಾಗಿ ಉನ್ನತ ಉದ್ಯೋಗ ಪಡೆಯಬೇಕು. ಮುಂದಿನ ದಿನಗಳಲ್ಲಿ ಉನ್ನತ ವ್ಯಾಸಂಗ ಮಾಡಿ ಸಂಶೋಧನೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ 2021-22 ನೇ ಸಾಲಿನ ಅತಿ ಹೆಚ್ಚು ಅಂಕಗಳಿಸಿದ ಪ್ರಥಮ ಬಿ.ಎ ಮತ್ತು ಬಿ.ಕಾಂ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಯಿತು ಹಾಗೂ ಸ್ಕೌಡ್ಸ್ ಅಂಡ್ ಗೈಡ್ಸ್‍ನಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಿ.ಚನ್ನಕೇಶವ, ಐ.ಕ್ಯೂ.ಎ.ಸಿ ಸಂಚಾಲಕ ಡಾ. ಶಿವಣ್ಣ, ಪತ್ರಾಂಕಿತ ವ್ಯವಸ್ಥಾಪಕ ಕೆ.ಎನ್.ಬಸಣ್ಣ ಗೌಡ, ಕನ್ನಡ ವಿಭಾಗದ ಮುಖ್ಯಸ್ಥ ಮಂಜುನಾಥ, ಅರ್ಧಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಲೀಲಾವತಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸಿ. ಸಿದ್ದಪ್ಪ,  ಗ್ರಂಥಾಪಾಲಕ ಕುಮಾರಸ್ವಾಮಿ, ಕ್ರೀಡಾ ಸಮಿತಿ ಸಂಚಾಲಕ ಶಿವಪ್ರಸಾದ್ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

[t4b-ticker]

You May Also Like

More From Author

+ There are no comments

Add yours