ಬೆಂಗಳೂರು, ಅ.7: ರಸ್ತೆ ಅಪಘಾತಗಳನ್ನು ತಡೆಗಟ್ಟಲು ಹಾಗೂ ಸವಾರರ ಸುರಕ್ಷತೆಗೆ ಹೆಚ್ಚಿನ ಮಹತ್ವ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬಳಕೆ, ತಯಾರಿಕೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ಬ್ಯಾನ್ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.


ದ್ವಿಚಕ್ರ ವಾಹನ ಸವಾರರು ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ. ಬಿಐಎಸ್ ಅಥವಾ ಐಎಸ್ಐ ಗುಣಮಟ್ಟದ ಮಾನದಂಡಗಳನ್ನು ಪಾಲಿಸುವ ಹೆಲ್ಮೆಟ್ಗಳನ್ನು ಮಾತ್ರ ಬಳಸಬೇಕು. ಒಂದು ವೇಳೆ ಹಾಫ್ ಹೆಲ್ಮೆಟ್ ಬಳಸಿ, ನಿಯಮ ಉಲ್ಲಂಘಿಸಿದ್ರೇ ದಂಡ ವಿಧಿಸುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.


