ವದ್ದಿಕೆರೆ ಸಿದ್ದೇಶ್ವರ ದೇವರ ಹುಂಡಿಯಲ್ಲಿ ಎಷ್ಟು ಕೋಟಿ ಇತ್ತು ಗೊತ್ತೆ.

 

ಹಿರಿಯೂರು: ಜಿಲ್ಲಾಧಿಕಾರಿಗಳು ಚಿತ್ರದುರ್ಗ ಜಿಲ್ಲೆರವರ ನಿರ್ದೇಶನದಂತೆ ಅಧಿಸೂಚಿತ “ಎ” ಪ್ರವರ್ಗದ ಹಿರಿಯೂರು ತಾಲೂಕಿನ ಐಮಂಗಲ ಹೋಬಳಿಯ ವದ್ದಿಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರ ಸ್ವಾಮಿ ಯಾನೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳಾದ ಎಂ ಕಾರ್ತಿಕ್ ರವರು ಹಾಗೂ ತಹಶೀಲ್ದಾರ್ ರಾಜೇಶ್ ಕುಮಾರ್ ರವರಗಳ ಮಾರ್ಗದರ್ಶನದಲ್ಲಿ ದೇವಸ್ಥಾನದಲ್ಲಿನ ಕಾಣಿಕೆಹುಂಡಿಗಳ ಹಣವನ್ನು ಎಣಿಕೆ ಮಾಡಲಾಗಿ, ಹಿರಿಯೂರು ತಾಲೂಕಿನ ಇತಿಹಾಸದಲ್ಲಿ ಪ್ರಥಮ ಬಾರಿಗೆ ದಾಖಲೆ ಮೊತ್ತದ ರೂಪಾಯಿ.1,24,67,800/- (ಒಂದು ಕೋಟಿ 24 ಲಕ್ಷದ 67 ಸಾವಿರದ 800ರೂಪಾಯಿಗಳು) ಗಳು ಕಾಣಿಕೆ ಹುಂಡಿಯಲ್ಲಿ ಅಪಾರ ಮೊತ್ತದ ಹಣ ಸಂಗ್ರಹವಾಗಿದೆ. ಇದರಲ್ಲಿ ವಿದೇಶಿ ಕರೆನ್ಸಿಗಳು ಸೇರಿದಂತೆ, ಭಕ್ತರು ಹರಕೆ ರೂಪದಲ್ಲಿ ಸಲ್ಲಿಸಿದ ಬಂಗಾರ ಮತ್ತು ಬೆಳ್ಳಿ ಆಭರಣಗಳು ಸಹಾ ಕಾಣಿಕೆ ರೂಪದಲ್ಲಿ ಸ್ವಾಮಿಗೆ ಅರ್ಪಿತವಾಗಿವೆ. ಕಾಣಿಕೆಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ದೇವಸ್ಥಾನದ ಹೆಸರಿನಲ್ಲಿ ತೆರೆದಿರುವ ಉಳಿತಾಯ ಖಾತೆಗಳಿಗೆ ಸಮನಾಗಿ 1) ಕೆನರಾ ಬ್ಯಾಂಕ್ ಐಮಂಗಲ ಶಾಖೆ ಹಾಗೂ 2) ಪ್ರಗತಿ ಕೃಷ್ಣ ಬ್ಯಾಂಕ್ ಯರಬಳ್ಳಿ ಶಾಖೆ ರವರುಗಳಿಗೆ ಸ್ಥಳದಲ್ಲಿ ಜಮಾ ಮಾಡಲಾಗಿರುತ್ತದೆ. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳಾದ ಎಂ ಕಾರ್ತಿಕ್ ರವರು ಹಾಗೂ ತಹಶೀಲ್ದಾರ್ ರಾಜೇಶ್ ಕುಮಾರ್ ರವರು ಮತ್ತು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು ಹಾಗೂ ಹಿರಿಯೂರು ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು, ವದ್ದಿಕೆರೆ ಗ್ರಾಮಸ್ಥರುಗಳು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours