ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ಹವಾಮಾನ ಕಂಡುಬಂದರೂ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆ ಅಂದಾಜಿಸಲಾಗಿದೆ. ಸಾಧಾರಾಣ ಅಥವಾ ಮಧ್ಯಮ ಮಟ್ಟದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಗುಡುಗು-ಮಿಂಚಿನ ಆರ್ಭಟವೂ ಇರಲಿದೆ. ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹವಾಮಾನ ಮುನ್ಸೂಚನೆ ಪ್ರಕಾರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ ತಾತ್ಕಾಲಿಕವಾಗಿ ಬಿಸಿಲಿನಿಂದ ನಿರಾಳತೆ ಸಿಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಭಾಗಗಳಲ್ಲಿ ಕೂಡ ಗುಡುಗು-ಮಿಂಚಿನೊಂದಿಗೆ ಗಾಳಿ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಕೆಲ ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆಯನ್ನೂ ನೀಡಲಾಗಿದೆ.





