ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ವಸಂತಿ ಸಿ. ಪೂಜಾರಿ ಕುದ್ಯಾಡಿ ಅವರನ್ನು ಭಾರತೀಯ ರಾಷ್ಟ್ರಿಯ ಕಾಂಗ್ರೆಸ್ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕ ಗ್ರಾಮೀಣ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಡಿಸಿಸಿ ಮಾಜಿ ಸದಸ್ಯೆಯಾಗಿರುವ ಇವರು ನಾವರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯೆಯಾಗಿ, ಬೆಳ್ತಂಗಡಿ ನಗರ ಬ್ಲಾಕ್ ಮಹಿಳಾ ಘಟಕದ ಮಾಜಿ ಉಪಾಧ್ಯಕ್ಷರಾಗಿ ಸಾಮಾಜಿಕವಾಗಿ ಸೇವೆ ಸಲ್ಲಿಸಿದ್ದರು.









