ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಡಿ.03:
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವೀರಶೈವ ಲಿಂಗಾಯತ ಜನಾಂಗದವರ ಆರ್ಥಿಕ ಅಭಿವೃದ್ಧಿಗಾಗಿ 2022-23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯ ಬಯಸುವವರಿಗೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕವನ್ನು ಇದೇ ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.
ವೀರಶೈವ ಲಿಂಗಾಯತ ಜನಾಂಗದವರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ ಬಸವ ಬೆಳಗು, ವಿದೇಶ ವಿದ್ಯಾವಿಕಾಸ, ಜೀವಜಲ, ಕಾಯಕ ಕಿರಣ, ಸ್ವ-ಸಹಾಯ ಸಂಘಗಳಿಗೆ ಉತ್ತೇಜನೆ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಈಗಾಗಲೇ ಗ್ರಾಮ ಒನ್, ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನಿಸಿ, ಅಂತಿಮ ದಿನಾಂಕವನ್ನು ನಿಗಧಿಪಡಿಸಲಾಗಿತ್ತು. ಈ ಯೋಜನೆಗಳಲ್ಲಿ ನಿಗಧಿತ ಗುರಿಯನ್ವಯ ಅರ್ಜಿಗಳು ಸ್ವೀಕೃತವಾಗದ ಕಾರಣ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಕೊನೆಯ ದಿನಾಂಕವನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.
ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಫಲಾಪೇಕ್ಷಿಗಳು ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ವಿ.ವೆಂಕಟರಾಜು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours