ಹಿಂದೂ ಮಹಾಗಣಪತಿ ವಿಸರ್ಜನೆಗೆ ವಾಹನಗಳ ಸಂಚಾರ ಬದಲಾವಣೆ

 

ಸಂಚಾರ ಮಾರ್ಗ ಬದಲಾವಣೆ ಹಾಗೂ ಮದ್ಯ ಮಾರಾಟ ನಿಷೇಧ
ಚಿತ್ರದುರ್ಗ ( chitradurga)
ಇದೇ ಅಕ್ಟೋಬರ್ 8ರಂದು ಚಿತ್ರದುರ್ಗ ನಗರದಲ್ಲಿ  ಹಿಂದೂ ಮಹಾಗಣಪತಿ   (Hindu maha ganapathi)  ವಿಸರ್ಜನಾ ಮೆರವಣಿಗೆ ಇರುವುದರಿಂದ ನಗರದಲ್ಲಿನ ರಸ್ತೆ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಶ್ರೀ ಅಹೋಬಲ ಟಿವಿಎಸ್ ನಲ್ಲಿ ಭರ್ಜರಿ ಉದ್ಯೋಗ
ಚಿತ್ರದುರ್ಗ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಕಾರ್ಯಕ್ರಮ ಅಕ್ಟೋಬರ್ 08 ರಂದು ನಡೆಯಲಿದ್ದು, ಸಾರ್ವಜನಿಕ ಸಂಚಾರ ಸುಗಮಗೊಳಿಸುವ ದೃಷ್ಟಿಯಿಂದ ಅಕ್ಟೋಬರ್ 8ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ  12 ಗಂಟೆಯವರೆಗೆ ನಗರದ ಮುಖ್ಯರಸ್ತೆ ಮತ್ತು ಇತರೆ ರಸ್ತೆಗಳಲ್ಲಿ ಸಂಚರಿಸಲಿರುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಿದ್ದಾರೆ.
ವಿಸರ್ಜನಾ ಮೆರವಣಿಗೆಯು ನಗರದಲ್ಲಿನ ಮುಖ್ಯ ರಸ್ತೆಯಾದ ಬಿ.ಡಿ.ರಸ್ತೆಯಲ್ಲಿ ಸಾಗಿ ಹೊಳಲ್ಕೆರೆ ರಸ್ತೆ ಮುಖಾಂತರ ಸಾಗಲಿದ್ದು, ಈ ವಿಸರ್ಜನಾ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಸುಗಮ ಸಂಚಾರದ ಹಿತದೃಷ್ಟಿಯಿಂದ ಚಿತ್ರದುರ್ಗ ನಗರದಲ್ಲಿ ಸಂಚರಿಸಲಿರುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಆದೇಶ ಮಾಡಲಾಗಿದೆ.
ಮಾರ್ಗ ಬದಲಾವಣೆ ವಿವರ : ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್‍ನಿಂದ ಮಹಾತ್ಮ ಗಾಂಧಿ ವೃತ್ತ, ಹೊಳಲ್ಕೆರೆ ಮಾರ್ಗದ ಕಣಿವೆ ಕ್ರಾಸ್‍ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರ ನಿಷೇಧಿಸಿದೆ. ಬೆಂಗಳೂರು, ಚಳ್ಳಕರೆ, ಹೊಸಪೇಟೆ, ದಾವಣಗೆರೆ, ಶಿವಮೊಗ್ಗ ಹಾಗೂ ಭೀಮಸಮುದ್ರ ಕಡೆಯಿಂದ ಬರುವ ಎಲ್ಲಾ ಮಾದರಿಯ ಲಘು ಮತ್ತು ಭಾರಿ ವಾಹನಗಳು ಹಾಗೂ ಖಾಸಗಿ ಮತ್ತು ಕೆಎಸ್‍ಆರ್‍ಟಿಸಿ ಬಸ್ಸುಗಳು ಎನ್.ಹೆಚ್-48 ರಸ್ತೆಯ ಮುಖಾಂತರ ಬಂದು ನಗರದ ಮೆದೇಹಳ್ಳಿ ರಸ್ತೆ ಮತ್ತು ಜೆಎಂಐಟಿ ವೃತ್ತದ ಮುಖಾಂತರ ನಗರಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸ್ ಸಂಚರಿಸುವುದು.
ಮದ್ಯ ಮಾರಾಟ ನಿಷೇಧ: ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಸಂಬಂಧ ಅಕ್ಟೋಬರ್ 08 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ ಹೊರಡಿಸಿದೆ.
[t4b-ticker]

You May Also Like

More From Author

+ There are no comments

Add yours