ವೇಣೂರು: ಫಲ್ಗುಣಿ ಸೇವಾ ಸಂಘ (ರಿ.) ವೇಣೂರು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯಲಿರುವ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಪೂರ್ವಭಾವಿ ಸಭೆಯು ಇಂದು (ಆ. 19) ಫಲ್ಗುಣಿ ಸೇವಾ ಟ್ರಸ್ಟ್ ಸ್ಥಾಪಕಾಧ್ಯಕ್ಷರಾದ ವಿ.ಎಸ್. ಜಯರಾಜ್ ಅವರ ಅಧ್ಯಕ್ಷತೆಯಲ್ಲಿ ವೇಣೂರು ಬಸ್ ನಿಲ್ದಾಣ ಕಟ್ಟಡದ ಸಭಾಂಗಣದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.26ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಪಿ. ಜಗದೀಶ್ ಭಟ್ ಶ್ರೀನಿಧಿ ಹಾಗೂ ಕಾರ್ಯದರ್ಶಿಯಾಗಿ ಎ. ಪ್ರಶಾಂತ್ ಹೆಬ್ಬಾರ್ ಅವರನ್ನು ಆಯ್ಕೆ ಮಾಡಲಾಯಿತು.
ಕೋಶಾಧಿಕಾರಿಗಳಾಗಿ ಜಗದೀಶ್ಚಂದ್ರ ಡಿ.ಕೆ. ಹಾಗೂ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು ಆಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ಕೆ. ಭಾಸ್ಕರ ಪೈ, ಸುದತ್ ಜೈನ್, ಪ್ರವೀಣ್ ಭಂಡಾರಿ, ನೇಮಯ್ಯ ಕುಲಾಲ್, ನವೀನ್ ಪಚ್ಚೇರಿ, ಸುಧೀರ್ ಭಂಡಾರಿ ಅವರನ್ನು ಆಯ್ಕೆ ಮಾಡಲಾಯಿತು ಅಲ್ಲದೆ ಸಮಿತಿಗೆ 50 ಮಂದಿ ಸದಸ್ಯರನ್ನು ನೇಮಿಸಲಾಯಿತು.
ಕಾರ್ಯದರ್ಶಿ ಪ್ರಶಾಂತ್ ಹೆಬ್ಬಾರ್ ವಂದಿಸಿದರು. ಫಲ್ಗುಣಿ ಸೇವಾ ಸಂಘದ ಕಾರ್ಯದರ್ಶಿ ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.

ಸಭೆಯಲ್ಲಿ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ದತೆಗಳ ಬಗ್ಗೆ ಚರ್ಚಿಸಲಾಯಿತು. ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಹಾಗೂ ವಿಸರ್ಜನಾ ಮೆರವಣಿಗೆ ಬಗ್ಗೆ ಚರ್ಚಿಸಲಾಯಿತು. ಫಲ್ಗುಣಿ ಸೇವಾ ಸಂಘ (ರಿ.) ವೇಣೂರು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸದಸ್ಯರು ಹಾಗೂ ಹಲವು ಮಂದಿ ಗಣ್ಯರು ಉಪಸ್ಥಿತರಿದ್ದರು.
ಸೇವಾ ರಶೀದಿ ಬಿಡುಗಡೆ
ಕಾರ್ಯಕ್ರಮದ ಪೂರ್ವಭಾವಿಯಾಗಿ ೧೦೮ ತೆಂಗಿನಕಾಯಿ ಗಣಹೋಮದ ರಶೀದಿಯನ್ನು ವೇಣೂರಿನ ಆದಿತ್ಯ ನಾಯಕ್ ಹಾಗೂ ನಿರ್ಮಲ್ ಪೈ ಅವರು ಸಾಂಕೇತಿಕವಾಗಿ ಬಿಡುಗಡೆ ಮಾಡಿದರು.
ಸೆ. 14-15ರಂದು ವೇಣೂರು ಮುಖ್ಯಪೇಟೆಯ ಜಿನಪ್ರಸಾದ್ ಕಾಂಪ್ಲೆಕ್ಸ್ ಬಳಿ ಸಾರ್ವಜನಿಕ ಗಣೇಶೋತ್ಸವ ಸಂಭ್ರಮ ನಡೆಯಲಿದೆ.



