ವೇಣೂರು: ಭಾಗ್ಯನಿಧಿ ಸಂಜೀವಿನಿ ಮಹಿಳಾ ಒಕ್ಕೂಟ ರಿ. ವೇಣೂರು ಇದರ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾ. 30ರಂದು ಗಾರ್ಡನ್ ವ್ಯೂ ಕಾಂಪ್ಲೆಕ್ಸ್ನ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸುಚಿತ್ರಾ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೇಣೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು.
ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಕುಸುಮಾವತಿ, ವೇಣೂರು ಠಾಣೆಯ ಮಹಿಳಾ ಪೊಲೀಸ್ ಕಾನ್ಸ್ಸ್ಟೇಬಲ್ ಕೇಶವತಿ, ಬ್ಲಾಕ್ ಮೆನೇಜರ್ ನಿತೀಶ್ ಕುಲಾಲ್, ಬೆಳ್ತಂಗಡಿ ವಲಯ ಮೇಲ್ವಿಚಾರಕ ಜಯಾನಂದ, ಆರ್ಥಿಕ ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್ ಅತಿಥಿ ನೆಲೆಯಲ್ಲಿ ಮಾತನಾಡಿದರು. ವಲಯ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂಬಿಕೆ ಸುಲತಾ ಸ್ವಾಗತಿಸಿ, ದೀಪಶ್ರೀ ಸಂಜೀವಿನಿ ಸದಸ್ಯೆ ಚಂದ್ರಿಕಾ ಪ್ರಾರ್ಥಿಸಿದರು. ಶ್ರೀಮತಿ ಚೈತ್ರಾ ಕಾರ್ಯಕ್ರಮ ನಿರೂಪಿಸಿ, ಶ್ರೀಲಕ್ಷ್ಮೀ ಸಂಜೀವಿನಿಯ ಕೇಶವತಿ ವಂದಿಸಿದರು.





