ವೇಣೂರು: ಅಡಿಕೆ ತೋಟಗಳಿಗೆ ಅಕ್ರಮವಾಗಿ ನುಗ್ಗಿದ ಬಿಹಾರ ಮೂಲದ ಕಾರ್ಮಿಕನನ್ನು ಗ್ರಾಮಸ್ಥರು ಅಡಿಕೆ ಮರಕ್ಕೆ ಕಟ್ಟಿ ಹಾಕಿ ಪೊಲೀಸರಿಗೊಪ್ಪಿಸಿದ ವಿದ್ಯಾಮಾನ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕರಿಮಣೇಲು ಗ್ರಾಮದಲ್ಲಿ ಕಟ್ಟಡ ಕೆಲಸಕ್ಕೆ ಬಂದಿದ್ದ ಕಾರ್ಮಿಕನೋರ್ವ ಸ್ಥಳೀಯ ಅಡಿಕೆ ತೋಟಕ್ಕೆ ಅಕ್ರಮವಾಗಿ ನುಗ್ಗಿದ್ದಾನೆ. ಇದನ್ನು ಪ್ರಶ್ನಿಸಿದ ಮನೆಮಂದಿಗೆ ನಶೆಯಲ್ಲಿದ್ದ ಯುಕವ ಧಮ್ಕಿ ಹಾಕಿದ್ದಾನೆ ಎಂದು ಆರೋಪಿಸಲಾಗಿದ್ದು, ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಆತನನ್ನು ಅಡಿಕೆ ಮರಕ್ಕೆ ಕಟ್ಟಿಹಾಕಿ ಪಾಠ ಮಾಡಿದ್ದಾರೆ. ಬಳಿಕ ಆತನನ್ನು ವೇಣೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಆತನ ಗುತ್ತಿಗೆದಾರನಿಗೆ ಮಾಹಿತಿ ನೀಡಿ ಬಿಹಾರಕ್ಕೆ ವಾಪಾಸು ಕಳುಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.






