ಮಂಗಳೂರು: ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.)ಕ್ಕೆ 0.14 ಎಕ್ರೆ ನಿವೇಶನ ಮಂಜೂರು ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವೇಣೂರು ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಮಂಗಳೂರಿನಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಕೀರ್ತಿಶೇಷ ಕೆ. ವಸಂತ ಬಂಗೇರ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೇಶವನ್ನು ಮಂಜೂರುಗೊಳಿಸಿದ್ದರು. ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ, ಗೌರವ ಸಲಹೆಗಾರರಾದ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು, ಬೆಳ್ತಂಗಡಿ ಶ್ರೀ ಗು.ನಾ.ಸ್ವಾ.ಸೇ. ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಕಾರ್ಯದರ್ಶಿ ನಿತೀಶ್ ಕುಕ್ಕೇಡಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ. ಪ್ರಸಾದ್ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.









