ವೇಣೂರು: ಕುಕ್ಕೇಡಿ ಗ್ರಾಮದ ಪಾಣೂರು ನಿವಾಸಿ ವೇಣೂರು ಸಿಎ ಬ್ಯಾಂಕ್ ಮಾಜಿ ನಿರ್ದೇಶಕರಾಗಿದ್ದ ರಾಜೇಂದ್ರ ರಾವ್ ಅವರು ಇಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಅವರು ಪಾಣೂರು ತುಳು ಒಕ್ಕೂಟದ ಸಂಚಾಲಕರೂ ಆಗಿದ್ದರು. ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ಇವರ ನಿಧನಕ್ಕೆ ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ. ತೀವ್ರ ಸಂತಾಪ ಸೂಚಿಸಿದ್ದಾರೆ.









