ವೇಣೂರು: ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ 2026 -27 ನೇ ಸಾಲಿನ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯ ಜೂ. 13ರಂದು ಮೋಬೈಲ್ ಆ್ಯಪ್ ಬಳಸಿ ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಯಂ) ಮಾದರಿಯಲ್ಲಿ ನಡೆಸಲಾಯಿತು.
ಚುನಾವಣೆಯಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಅಶ್ವತ್ ಜಿ.ದೇವಾಡಿಗ ಹಾಗೂ ಕಾರ್ಯದರ್ಶಿಯಾಗಿ ಪ್ರತೀಕ್ ಆಯ್ಕೆ ಆಗಿರುತ್ತಾರೆ.



