ವೇಣೂರು: ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಇಲ್ಲಿಯ ಪ್ರಾ.ಆ.ಕೇಂದ್ರದಲ್ಲಿ ಬೆಳ್ತಂಗಡಿ ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿ ಪ್ರಯುಕ್ತ ದಂಪತಿ ಸಬಲೀಕರಣ ಕಾರ್ಯಕ್ರಮವು ಜು.15ರಂದು ಬೆಳಿಗ್ಗೆ 10-00 ಗಂಟೆಯಿಂದ ನಡೆಯಲಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರ ವೇಣೂರು, ಸಂಜೀವಿನಿ ಒಕ್ಕೂಟ ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಈ ಕಾರ್ಯಕ್ರಮ ಜರಗಲಿದ್ದು, ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾಮಟ್ಟ, ತಾಲೂಕು ಮಟ್ಟದ ಅಧಿಕಾರಿಗಳು, ವೈದ್ಯಾಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನವದಂಪತಿಗಳಿಗೆ ಹೊಸಹೆಜ್ಜೆ ಕಾರ್ಯಕ್ರಮದ ಬಗ್ಗೆ ಮಾಹಿತಿ, ಕುಟುಂಬ ಕಲ್ಯಾಣ ಯೋಜನೆಯ ಬಗ್ಗೆ ಅರಿವು ಮೂಡಿಸುವಿಕೆ, ಹಾಗೂ ಸ್ಥಳದಲ್ಲೆ ಕುಟುಂಬ ಕಲ್ಯಾಣ ಯೋಜನೆಗಳನ್ನು ನೀಡುವುದು, ಮುಂತಾದ ಮಾಹಿತಿ ಕಾರ್ಯಕ್ರಮಗಳು ನಡೆಯಲಿದೆ. ನವದಂಪತಿಯರು, ಅರ್ಹ ದಂಪತಿಯರು, (ತಾಯಂದಿರು) ಈ ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಇಲಾಖಾ ಪ್ರಕಟಣೆ ತಿಳಿಸಿದೆ.



