ವೇಣೂರು: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ 6 ವರ್ಷದ ಮಗುವಿನ ಮೇಲೆ 2 ಜನರಿಂದ ಸತತ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದು, ಇನ್ನೊಬ್ಬ ಆರೋಪಿ ಮುಂಬಯಿ ನಗರಕ್ಕೆ ಪರಾರಿಯಾಗಿದ್ದಾನೆ ಎಂದು ಮಾಹಿತಿ ಲಭಿಸಿದೆ.
ಮೊಬೈಲ್ ಫೋನ್ ಗೆಳೆಯನಿಗೆ ನೀಡಿದ ಸಮಯದಲ್ಲಿ ಅದರಲ್ಲಿ ಸೆರೆ ಹಿಡಿಯಲಾದ ದೃಶ್ಯಾವಳಿಗಳನ್ನು ಗಮನಿಸಿ ಸ್ನೇಹಿತನಿಂದ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಇದೀಗ ದೂರು ನೀಡಿದಾತನ ಮೇಲೆ ಆರೋಪಿಗಳು ಜೀವಬೆದರಿಕೆ ಒಡ್ಡುತ್ತಿರುವ ಆರೋಪವೂ ಕೇಳಿ ಬಂದಿದೆ.



