ವೇಣೂರು: ಇಲ್ಲಿಯ ಗ್ರಾಮ ಪಂಚಾಯತ್ ಕಚೇರಿಗೆ ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ ಹಾಗೂ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ ನೀಡಿ ಆಡಳಿತ ಮಂಡಳಿ ಜೊತೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಕಾಶಿನಾಥ್ ಹೆಗ್ಡೆ, ಪಂಚಾಯತ್ ಸದಸ್ಯರುಗಳು, ತಾ. ಕಾರ್ಯನಿರ್ವಾಹಣಾ ಅಧಿಕಾರಿ, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಎಲ್ಲರನ್ನೂ ಸ್ವಾಗತಿಸಿ, ಧನ್ಯವಾದವಿತ್ತರು, ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.






