ವೇಣೂರು: ಕರ್ನಾಟಕ ಸರಕಾರದ ಆದೇಶದಂತೆ ದಿನಾಂಕ ಸೆ. 5ರಂದು ಬೆಳಗ್ಗೆ 10-00 ಗಂಟೆಗೆ ವೇಣೂರು ಭರತೇಶ ಸಮುದಾಯ ಭವನದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಎಲ್ಲಾ ಜನಪ್ರತಿನಿಧಿಗಳು ಹಾಗೂ ತಾಲೂಕು ಮಟ್ಟದ ಇಲಾಖಾ ಅಧಿಕಾರಿಗಳು ಭಾಗವಹಿಸಲಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ವೇಣೂರು ಗ್ರಾ.ಪಂ.ನ ಪ್ರಕಟಣೆ ತಿಳಿಸಿದೆ.


ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಲು ‘ ಪ್ರಜಾಸೇವಾ ‘ ಸಜ್ಜುಗೊಂಡಿದೆ. ಸೆಪ್ಟೆಂಬರ್ 5 ಕ್ಕೆ ಪ್ರಜಾಸೇವೆಗೆ ಚಾಲನೆ ಸಿಗಲಿದ್ದು, ಮುಂದಿನ ದಿನಗಳಲ್ಲಿ ಕ್ಷಣಾರ್ಧದಲ್ಲೇ ಜನರ ಸಮಸ್ಯೆಗಳಿಗೆ ಪರಿಹಾರ ದೊರಕಲಿದೆ.
ಪ್ರಮುಖ ಉದ್ದೇಶಗಳು ಏನೇನು?
ನೇರ ಆಡಳಿತ: ಸಾರ್ವಜನಿಕರು ತಮ್ಮ ಸಣ್ಣಪುಟ್ಟ ಸಮಸ್ಯೆಗಳಿಗಾಗಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವುದು.
ತ್ವರಿತ ಪರಿಹಾರ: ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಿ ಕಾಲಮಿತಿಯಲ್ಲಿ ವಿಲೇವಾರಿ ಮಾಡುವುದು.
ಪಾರದರ್ಶಕತೆ: ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಹೆಚ್ಚಿಸುವುದು.



