ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ, ಹಿರಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿರುವ ಸೇಸ ಎಂ. ಅವರ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಸೇಸ ಎಂ. ಅವರು ಬೈಕ್ ಅಪಘಾತದಲ್ಲಿ ಗಾಯಗೊಂಡು ಕಾಲು ನೋವಿನಿಂದ ಬಳಲುತ್ತಿದ್ದು, ವಿಶ್ರಾಂತಿಯಲ್ಲಿದ್ದಾರೆ. ಪೂಂಜ ಅವರು ಪಕ್ಷ ಭೇದ ಮರೆತು ಭೇಟಿ ನೀಟಿ ಯೋಗ ಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ವೇಣೂರು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ರಾಜೇಶ್ ಪೂಜಾರಿ ಕೊಪ್ಪಡಬಾಕಿಮಾರು ಜೊತೆಗಿದ್ದರು.





