ವೇಣೂರು: ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲಿಸಿದೆ.
ವಾಣಿಜ್ಯ ವಿಭಾಗದಲ್ಲಿ 88 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 25 ಮಂದಿ ಉನ್ನತ ಶ್ರೇಣಿಯಲ್ಲಿ, 54 ಮಂದಿ ಪ್ರಥಮ ಶ್ರೇಣಿಯಲ್ಲಿ, 8 ಮಂದಿ ದ್ವಿತೀಯ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ, 88 ಮಂದಿ ವಿದ್ಯಾರ್ಥಿಗಳೂ ಉತ್ತೀರ್ಣರಾಗುವ ಮೂಲಕ ಶೇ. 100 ಫಲಿತಾಂಶ ದಾಖಲಿಸಿದೆ.





