ಮಂಗಳೂರು, ಡಿ. 10: ಕರ್ನಾಟಕ ಯಕ್ಷಗಾನ ಅಕಾಡೆಮಿಯು 2025ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿಗಳು, ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗಳು, ದತ್ತಿ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನಗಳ ವಿಜೇತರ ಪಟ್ಟಿಯನ್ನು ಪ್ರಕಟಿಸಿದ್ದು, ವೇಣೂರು ಸದಾಶಿವ ಕುಲಾಲ್ ಅವರು ಯಕ್ಷಸಿರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಯಕ್ಷಗಾನದಲ್ಲಿ ದಿಗಿಣದ ರಾಜ ಎಂದೇ ಪ್ರಸಿದ್ಧಿ ಪಡೆದಿರುವ ಸದಾಶಿವ ಕುಲಾಲ್ ಅವರು, ಯಕ್ಷಗಾನ ಸಂಘಟಕ ಮತ್ತು ಸಮುದಾಯ ಸಾಂಸ್ಕೃತಿಕ ಪ್ರವರ್ತಕರಾಗಿ ಸೇವೆ ನೀಡುತ್ತಿರುವುದ್ದಕ್ಕಾಗಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ 21ರಂದು ಉಡುಪಿ ಜಿಲ್ಲೆಯ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿದೆ.






