ವೇಣೂರು: ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮೇ 17ರಂದು ಗುಂಡೂರಿ ತುಂಬೆದಲೆಕ್ಕಿಯ ಶ್ರೀ ಸತ್ಯನಾರಾಯಣ ಭಜನ ಮಂದಿರದ ವಠಾರದಲ್ಲಿ ಬೆಳಿಗ್ಗೆ 9-30ರಿಂದ ನಡೆಯಲಿದೆ.
ಗುರುಪೂಜೆಯ ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘದ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು ಉದ್ಘಾಟನೆ ಮಾಡಲಿದ್ದಾರೆ. ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಅಧ್ಯಕ್ಷತೆ ವಹಿಸಲಿದ್ದು, ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬಿಜೆಪಿ ಮಂಗಳೂರು ವಿಭಾಗದ ಸಹಪ್ರಭಾರಿ ಜಯಂತ್ ಕೋಟ್ಯಾನ್, ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕಾಧ್ಯಕ್ಷೆ ಶ್ರೀಮತಿ ಸುಜೀತಾ ವಿ. ಬಂಗೇರ, ಶ್ರೀಮತಿ ಸುಮತಿ ಪ್ರಮೋದ್, ಎಂ.ಕೆ. ಪ್ರಸಾದ್, ಪ್ರಕಾಶ್ ಕೋಟ್ಯಾನ್ ಡೊಂಕುಬೆಟ್ಟು ನಾರಾವಿ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





