ವೇಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವೇಣೂರು ಒಕ್ಕೂಟ ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರದ್ಧಾಕೇಂದ್ರಗಳ ಶುಚಿತ್ವ ಕಾರ್ಯಕ್ರಮದಡಿ ಸ್ವಚ್ಛತಾ ಕರಸೇವೆ ನಡೆಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ. ಜಯರಾಮ್ ಶೆಟ್ಟಿ, ಯೋಜನೆಯ ಸೇವಾಪ್ರತಿನಿಧಿ ಜಯಂತಿ ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಇದ್ದರು.





