ವೇಣೂರು: ಶ್ರೀ ಜೈನದಿಗಂಬರ ತೀರ್ಥಕ್ಷೇತ್ರ ಸಮಿತಿ ವೇಣೂರು (ರಿ.) ಆಶ್ರಯದಲ್ಲಿ ದಶಲಕ್ಷಣ ಮಹಾಪರ್ವದ ಆಚರಣೆ ಕಾರ್ಯಕ್ರಮಕ್ಕೆ ಸೆ. 16ರಂದು ಚಾಲನೆ ದೊರೆತ್ತಿದ್ದು, ಇದರ ಸಮಾರೋಪ ಕಾರ್ಯಕ್ರಮವು ಇಂದು ಸೆ. 25ರಂದು ಸಂಜೆ 4-30ರಿಂದ ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಯಾತ್ರಿ ನಿವಾಸದಲ್ಲಿ ಜರಗಲಿದೆ.
ಇದಕ್ಕೂ ಮೊದಲು ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಜರಗಲಿದ್ದು, ಬಳಿಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಮೂಡುಬಿದಿರೆ ಶ್ರೀ ದಿಗಂಬರ ಜೈನಮಠದ ಡಾ. ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ಧಾರ್ಮಿಕ ಪ್ರವಚನ ನೀಡಲಿದ್ದಾರೆ. ಉಜಿರೆ ಎಸ್ಡಿಎಂ ಪ.ಪೂ. ಕಾಲೇಜಿನ ಪ್ರಾಂಶುಪಾಲ ಬಿ. ಪ್ರಮೋದ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಇಂದಿನ ಕಾರ್ಯಕ್ರಮದ ಪ್ರಾಯೋಜಕರಾಗಿರುವ ವಿ. ಪ್ರವೀಣ್ ಕುಮಾರ್ ಇಂದ್ರ ಮತ್ತು ಸತ್ಯಪ್ರಸಾದ್ ವಿ. ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





