ಹಿರಿಯ ನಟಿ ಲೀಲಾವತಿ ಇನ್ನಿಲ್ಲ

 

 

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಲೀಲಾವತಿ  (Leelavathi )ಅವರು ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ಸ್ವಗೃಹದಲ್ಲದೇ ಕೆಲವು ದಿನಗಳಿಂದ ಹಾಸಿಗೆ ಹಿಡಿದಿದ್ದರು. ಅವರನ್ನು ಇಂದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಅವರ ಅಂತ್ಯಕ್ರಿಯೆಯನ್ನು ನೆಲಮಂಗಲದಲ್ಲಿರುವ ಅವರ ತೋಟದ ಮನೆಯಲ್ಲೇ ನೇರವೇರಲಿದೆ ಅಂತ ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಇಂದು ರಾತ್ರಿ ಅವರ ಪಾರ್ಥೀವ ಶರೀರವವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ಬಳಿಕ ಅವರ ಅಂತ್ಯಕ್ರಿಯೆಯನ್ನು ನೇರವೇರಸಲಾಗುವುದು ಅಂತ ತಿಳಿದು ಬಂದಿದೆ.

ಇದನ್ನೂ ಓದಿ: ತಾಳಿ ಕಟ್ಟುವ ಶುಭ ವೇಳೆಗೆ ತಾಳಿಯನ್ನು ದಬ್ಬಿ ಮದುವೆ ಬೇಡವೆಂದ ಹುಡುಗಿ

ಲೀಲಾವತಿ ದಕ್ಷಿಣ ಭಾರತದ ನಟಿಯಾಗಿ ಗುರುತಿಸಿಕೊಂಡಿದ್ದರು. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000ನೇ ಸಾಲಿನಲ್ಲಿ ಪಡೆದ ಲೀಲಾವತಿ ಅವರು, ‘ತುಮಕೂರು ವಿಶ್ವವಿದ್ಯಾಲಯ’ದ ಗೌರವ ಡಾಕ್ಟರೇಟ್ ಪದವಿಯನ್ನು 2008ರಲ್ಲಿ ಪಡೆದಿದ್ದರು.

[t4b-ticker]

You May Also Like

More From Author

+ There are no comments

Add yours