ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ತನೆ ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್ನಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಭಾಗಿ ಆಗಿದ್ದಾಗಲೇ ಜೋ ಸೈಮನ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜೋ ಸೈಮನ್ ಅವರು ಕೊನೆ ಉಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.





