ಜನರು ಸರ್ಕಾರಿ ಸೇವೆಗೆ ಅಲೆದಾಡಬಾರದೆಂದು ಗ್ರಾಮ ವಾಸ್ತವ್ಯ:ಡಿಸಿ ಕವಿತಾ ಎಸ್.ಮನ್ನಿಕೇರಿ

 

(ಚಿತ್ರದುರ್ಗ).ಅ.15: (chitrdaurga) ಗ್ರಾಮವಾಸ್ತವ್ಯ ಕಾರ್ಯಕ್ರಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ರೂಪಿಸಿ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯಕ್ಕೆ ನಾಂದಿ ಹಾಡಿದ್ದಾರೆ.

 

ಗ್ರಾಮದ ಜನರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಒದಗಿಸುವುದು ಹಾಗೂ ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಗ್ರಾಮವಾಸ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಹೇಳಿದರು.

ಹೊಸದುರ್ಗ ತಾಲ್ಲೂಕಿನ ಮಾಡದಕೆರೆ ಹೋಬಳಿ ಅತ್ತಿಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಮಲ್ಲಾಪುರ ಗ್ರಾಮದಲ್ಲಿ ಶನಿವಾರ ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ಸಂಬಂಧಿಸಿದ ಸಮಸ್ಯೆಗಳ ಇತ್ಯರ್ಥ ಹಾಗೂ ಅರ್ಜಿಗಳ ವಿಲೇವಾರಿ ಮಾಡಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.chitrdaurga

ದೂರದ ಹಳ್ಳಿಗಳಿಂದ ಜನರು ಸರ್ಕಾರದ ಸೇವೆ ಪಡೆಯಲು ಹಣ, ಸಮಯ ಹಾಗೂ ಶ್ರಮವನ್ನು ವ್ಯಯಿಸಿ ಜಿಲ್ಲಾ ಕೇಂದ್ರಗಳಿಗೆ ಅಲೆದಾಡುತ್ತಾರೆ. ಇದನ್ನು ತಪ್ಪಿಸಿ, ಗ್ರಾಮದಲ್ಲಿ ಜನರಿಗೆ ಸರ್ಕಾರ ಸಲವತ್ತುಗಳು ದೊರಕಿಸಿಕೊಡಲಾಗುತ್ತದೆ. ಗ್ರಾಮವಾಸ್ತವ್ಯದಲ್ಲಿ ಜನರು ಸಲ್ಲಿಸುವ ಅರ್ಜಿಗಳಲ್ಲಿ, ಕಂದಾಯ ಇಲಾಖೆ ಸಂಬಂಧಿಸಿದ ಅರ್ಜಿಗಳನ್ನು ಎಲ್ಲಾ ತಕ್ಷಣವೇ ವಿಲೇವಾರಿ ಮಾಡಲಾಗುತ್ತದೆ. ಜನರು ರಸ್ತೆ, ವಿದ್ಯುತ್ ದೀಪ, ಆಸ್ಪತ್ರೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕೋರಿ ಅರ್ಜಿ ಸಲ್ಲಿಸುತ್ತಾರೆ. ಇವುಗಳ ಕುರಿತು ಅಗತ್ಯ ಕ್ರಮಕೈಗೊಳ್ಳು ಸಂಬಂಧಿಸಿದ ಇಲಾಖೆ ಮುಖ್ಯಸ್ಥರಿಗೆ ಕಳುಹಿಸಿಕೊಡಲಾಗುತ್ತದೆ.

 

ಅನುದಾನ ಲಭ್ಯತೆ ನೋಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಕೆಲವು ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಗ್ರಾಮ ಪಂಚಾಯತಿ ಕ್ರಿಯಾ ಯೋಜನೆಯಲ್ಲಿ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಜನರು ಸಲ್ಲಿಸುವ ಕುಂದು ಕೊರತೆಗಳನ್ನು ನೀಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು.chitrdaurga

ಚರ್ಮಗಂಟು ರೋಗದ ಕುರಿತು ಜಾಗೃತಿ: ದೇಶದ ಕೆಲವು ರಾಜ್ಯಗಳಲ್ಲಿ ಗಂಭೀರ ಪರಿಣಾಮ ಬೀರಿ ಜಾನುವಾರುಗಳ ಸಾವಿಗೆ ಕಾರಣವಾಗಿರುವ ಚರ್ಮಗಂಟು ಸಾಂಕ್ರಮಿಕ ರೋಗದ ಕುರಿತು ಗ್ರಾಮವಾಸ್ತವ್ಯದಲ್ಲಿ ಜಾಗೃತಿ ಮೂಡಿಸಲಾಯಿತು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಕಲ್ಲಪ್ಪ ಮಾತನಾಡಿ, ಚಿತ್ರದುರ್ಗ ಜಿಲ್ಲೆಯಲ್ಲಿ ಇದುವರೆಗೆ 1271 ಜಾನುವಾರುಗಳಲ್ಲಿ ಚರ್ಮಗಂಟು ಸಾಂಕ್ರಮಿಕ ರೋಗ ಕಂಡುಬಂದಿದೆ. 25 ಜಾನುವಾರುಗಳು ಮೃತಪಟ್ಟಿವೆ. ರೋಗ ಹರಡದಂತೆ ತಡೆಯಲು ರೋಗ ಕಂಡು ಬಂದ ಜಾನುವಾರುವನ್ನು ಹಿಂಡಿನಿಂದ ಪ್ರತ್ಯೇಕಿಸಿ ಚಿಕಿತ್ಸೆ ನೀಡಬೇಕು. ರೋಗ ಕಂಡುಬಂದ ಜಾನುವಾರುಗಳಿಗೆ ಕಚ್ಚಿದ ಸೊಳ್ಳೆ, ನೋಣ ಹಾಗೂ ಉಣ್ಣೆಗಳ ಆರೋಗ್ಯವಂತ ಜಾನುವಾರುವಿಗೆ ಕಚ್ಚಿದರೆ ಸಾಂಕ್ರಾಮಿಕ ರೋಗ ಹರಡುತ್ತದೆ. ಆದ್ದರಿಂದ ಜನರು ಸೊಳ್ಳೆಗಳ ನಿಯಂತ್ರಣಕ್ಕೆ ಮುಂದಾಗಬೇಕು. ರೋಗ ಕಂಡುಬಂದ ಜಾನುವಾರುವಿನ ಹಾಲು ಕುಡಿಯುವುದರಿಂದ ರೋಗ ಮನುಷ್ಯರಿಗೆ ಹರಡುವುದಿಲ್ಲ.

ಚರ್ಮಗಂಟು ರೋಗ ಕಂಡುಬಂದ 5 ಕಿ.ಮೀ ವ್ಯಾಪ್ತಿಯ ಎಲ್ಲಾ ಜಾನುವಾರುಗಳಿಗೂ ಲಸಿಕೆ ನೀಡಲಾಗುವುದು. ಕೇಂದ್ರ ಸರ್ಕಾರದಿಂದ ಕಾಲುಬಾಯಿ ರೋಗದ ಲಸಿಕೆ ಬರಲಿದ್ದು, ಜಾನುವಾರುಗಳಿಗೆ ನೀಡಲಾಗುವುದು ಎಂದರು.
ಗರ್ಭಿಣಿಯರಿಗೆ ಉಡಿ ತುಂಬಿದ ಜಿಲ್ಲಾಧಿಕಾರಿ: ಪೋಷಣಾ ಅಭಿಯಾನಕ್ಕೆ ಚಾಲನೇ ನೀಡಿದ ಜಿಲ್ಲಾಧಿಕಾರಿ ಕವಿತಾ ಎನ್ ಮನ್ನಿಕೇರಿ, ಗ್ರಾಮದ ಮೂವರು ಗರ್ಭಿಣಿ ಮಹಿಳೆಯರಿಗೆ ಉಡಿ ತುಂಬುವ ಶಾಸ್ತç ನೆರವೇರಿಸಿದರು. ಓರ್ವ ಗರ್ಭಿಣಿ ಮಹಿಳೆಗೆ ಮಾತೃವಂದನೆ ಯೋಜನೆಯಡಿ 5000 ರೂಪಾಯಿಗಳ ಪ್ರೋತ್ಸಾಹ ಧನ ನೀಡುವ ಆದೇಶ ಪತ್ರವನ್ನು ವಿತರಿಸಿದರು. ಮಕ್ಕಳಿಗೆ ಅನ್ನಪ್ರಾಶನ ಮಾಡಿಸಿದರು.

ತಹಶೀಲ್ದಾರ್ ಮಲ್ಲಿಕಾರ್ಜುನ್ ಮಾತನಾಡಿ, ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವು ಸರ್ಕಾರದ ಮಹತ್ವಾಕಾಂಕ್ಷೆ ಕಾರ್ಯಕ್ರಮವಾಗಿದ್ದು, ದೂರದ ಹಳ್ಳಿಗಳಿಂದ ತಾಲ್ಲೂಕು ಕೇಂದ್ರಗಳಿಗೆ ಬರಲು ಬಸ್ ಸೌಲಭ್ಯದ ಕೊರತೆ ಜೊತೆಗೆ ಸಮಯ ಮತ್ತು ಹಣವೂ ವ್ಯರ್ಥವಾಗಲಿದೆ. ಇದನ್ನು ಮನಗಂಡು ಸರ್ಕಾರ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಸಾಕಷ್ಟ ಅನುಕೂಲವಾಗಲಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಹೊಸದುರ್ಗ ತಾಲ್ಲೂಕಿನಲ್ಲಿ ಈವರೆಗೆ 450 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 350 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಇನ್ನೂ ಉಳಿದ 100 ಅರ್ಜಿಗಳು ಸಿ.ಸಿ.ರಸ್ತೆ, ಚರಂಡಿ ನಿರ್ಮಾಣ, ಮನೆ, ನಿವೇಶನಕ್ಕೆ ಸಂಬಂಧಿಸಿದ ಅರ್ಜಿಗಳಾಗಿದ್ದು, ಈ ಅರ್ಜಿಗಳನ್ನು ತಕ್ಷಣವೇ ಪರಿಹಾರ ನೀಡಲು ಸಾಧ್ಯವಾಗದೇ ಇರುವುದರಿಂದ ಸಂಬಂಧಪಟ್ಟ ಇಲಾಖೆಗಳಿಗೆ ಅನುದಾನ ಮಂಜೂರಾತಿಗೆ ಕಳುಹಿಸಲಾಗಿದೆ. ಅನುದಾನ ಮಂಜೂರಾತಿ ಆದ ನಂತರ ಅಗತ್ಯ ಕ್ರಮವಹಿಸಲಾಗುತ್ತಿದೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಚರ್ಚಿತವಾದ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಸೂಚನೆ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗಿದೆ ಎಂದು ಹೇಳಿದರು.

ಹೊಸದುರ್ಗ ತಾಲ್ಲೂಕಿನಲ್ಲಿ ಕಳೆದ ಸಾಲಿನಲ್ಲಿ ಹೆಚ್ಚಿನ ಮಳೆಯಾಗಿದ್ದರಿಂದ ರೂ.10.5 ಕೋಟಿ ಪರಿಹಾರ ನೀಡಲಾಗಿದೆ. ಈ ವರ್ಷವೂ ಕಳೆದ ಬಾರಿಗಿಂತ ಹೆಚ್ಚಿನ ಮಳೆಯಾಗಿದ್ದು, ತಾಲ್ಲೂಕಿನದ್ಯಂತ 479 ಮನೆಗಳು ಹಾನಿಯಾಗಿವೆ. 110 ಮನೆಗಳು ನೀರು ನುಗ್ಗಿದೆ. 269 ಮನೆಗಳಿಗೆ ಭಾಗಶಃ ಹಾಗೂ ತೀವ್ರತರ, ಪೂರ್ಣ ಹಾನಿಯಾಗಿದ್ದು, ಈವರೆಗೆ ರೂ.1.83 ಕೋಟಿ ಪರಿಹಾರ ನೀಡಲಾಗಿದೆ. 5 ಸಾವಿರ ಹೆಕ್ಟೇರ್ ಬೆಳೆಯ ಹಾನಿಯ ವಿವರವನ್ನು ಪರಿಹಾರ ತಂತ್ರಾಂಶದಲ್ಲಿ ನೊಂದಾ¬ಸಲಾಗಿದೆ. ಹೆಸರು ಬೆಳೆಗೆ ಈಗಾಗಲೇ ಪರಿಹಾರ ಬಂದಿದೆ. ಮೆಕ್ಕೆಜೋಳ, ಶೇಂಗಾ, ಹತ್ತಿ ಬೆಳೆ ಸಮೀಕ್ಷೆ ಕಾರ್ಯ ಮಾಡಲಾಗಿದ್ದು, 1 ಸಾವಿರ ಹೆಕ್ಟೇರ್ ಬೆಳೆಯ ಹಾನಿ ವಿವರವನ್ನು ಪರಿಹಾರ ತಂತ್ರಾAಶದಲ್ಲಿ ನೊಂದಾಯಿಸಲಾಗಿದೆ. ಬೆಳೆ ಸಮೀಕ್ಷಾ ಕಾರ್ಯದ ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡುವಂತೆ ರೈತರಲ್ಲಿ ಮನವಿ ಮಾಡಿದರು.

ವಿದ್ಯುತ್ ಉಪ ಕೇಂದ್ರ ಸ್ಥಾಪನೆ ಮಾಡಿ: ಅತ್ತಿಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 18 ಗ್ರಾಮಗಳು ಬರುತ್ತಿದ್ದು, ಗ್ರಾಮ ಪಂಚಾಯಿತಿಗೆ ಹಾಲುರಾಮೇಶ್ವರ ವಿದ್ಯುತ್ ಕೇಂದ್ರದಿAದ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳಲ್ಲಿಯೂ ಮಳೆಗೆ ಹಾನಿಗೊಳಗಾದ ವಿದ್ಯುತ್ ತಂತಿ ಹಾಗೂ ವಿದ್ಯುತ್ ಕಂಬಗಳು ಇದ್ದು, ಇವುಗಳನ್ನು ಸರಿಪಡಿಸಬೇಕು .ಜೊತೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪನೆ ಮಾಡಬೇಕು ಎಂದು ಅತ್ತಿಮಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಮನವಿ ಮಾಡಿದರು.

ಬೆಸ್ಕಾ ಸೆಕ್ಷನ್ ಅಧಿಕಾರಿ ಮಾತನಾಡಿ, ಅತ್ತಿಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಐದು ಎಕರೆ ಜಮೀನು ಮಂಜೂರಾತಿ ಮಾಡಿದರೆ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಮೇಲಾಧಿಕಾರಿಗಳಿಗೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು. ಗ್ರಾಮಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ತಕ್ಷಣವೇ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ ನೀಡಿದರು.
ಜಮೀನು ಮುಳುಗಡೆ ಪ್ರದೇಶಕ್ಕೆ ಡಿಸಿ ಭೇಟಿ, ಪರಿಶೀಲನೆ: ಹೊಸದುರ್ಗ ತಾಲ್ಲೂಕಿನ ಎಂ.ಮಲ್ಲಾಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಾಣಿವಿಲಾಸ ಸಾಗರ ಹಿನ್ನೀರಿಗೆ ಗ್ರಾಮದ ಕೃಷಿ ಮತ್ತು ತೋಟಗಾರಿಕೆಯ ಹಲವು ಜಮೀನುಗಳು ಮುಳುಗಡೆ ಆದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾರ್ಯಕ್ರಮದಲ್ಲಿ ಅತ್ತಿಮಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ, ಉಪಾಧ್ಯಕ್ಷ ಮಲ್ಲೇಶಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಕಲ್ಲಪ್ಪ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಈಶ, ಸಮಾಜ ಕಲ್ಯಾಣ ಅಧಿಕಾರಿ ಕಾಳಮ್ಮ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪವಿತ್ರ, ಅರಣ್ಯ ಇಲಾಖೆಯ ಅಧಿಕಾರಿ ಸುಜಾತಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಘವೇಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

[t4b-ticker]

You May Also Like

More From Author

+ There are no comments

Add yours