ಜನವರಿ 1 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಡಿ.22:
ಜಿಲ್ಲಾಡಳಿತದ ವತಿಯಿಂದ ಜನವರಿ 01ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ ಬುರುಜನಹಟ್ಟಿಯ ಕೋಟೆ ಆಂಜನೇಯ ದೇಗುಲದ ವಿಶ್ವಕರ್ಮ ದೇಗಲುದಿಂದ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣೆಗೆಯು ಆನೆಬಾಗಿಲು, ಗಾಂಧಿವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ  ತರಾಸು ರಂಗಮಂದಿರದವರೆಗೆ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 11ಕ್ಕೆ ತರಾಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಅಮರಶಿಲ್ಪಿ ಜಕಣಾಚಾರಿ ಅವರ ಕುರಿತು ಪಿ.ಎಸ್.ರವಿಶಂಕರ್ ಅವರು ಉಪನ್ಯಾಸ ನೀಡುವರು ಎಂದರು.
ಸಮಾಜದ ಮುಖಂಡರು ಸಕ್ರಿಯವಾಗಿ ಭಾಗಹಿಸಿ, ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಿ ಯಶಸ್ವಿಗೊಳಿಸಬೇಕು ಎಂದು ಸಲಹೆ ನೀಡಿದರು.
ವಿಶ್ವಕರ್ಮ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ ಸಮಾಜದ ಒಬ್ಬರಿಗೆ ಜಕಣಾಚಾರಿ ಪ್ರಶಸ್ತಿ ನೀಡಿ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲು ಸಮಾಜದ ಮುಖಂಡರು ಕೋರಿದರು.
ಸಭೆಯಲ್ಲಿ ತಹಶೀಲ್ದಾರ್ ಸತ್ಯನಾರಾಯಣ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿಶ್ವಕರ್ಮ ಸಮಾಜದ ಮುಖಂಡರು ಇದ್ದರು.

[t4b-ticker]

You May Also Like

More From Author

+ There are no comments

Add yours