ನಾಳೆ 8 ಗಂಟೆಯಿಂದ ಮತದಾನ ಏಣಿಕೆ ಆರಂಭ

 

 

 

ಬೆಂಗಳೂರು : ಕರ್ನಾಟಕ ವಿಧಾನಸಭೆಗೆ ಜರುಗಿದ ಸಾರ್ವತ್ರಿಕ ಚುನಾವಣೆಯ ಮತ ಎಣಿಕಾ ಕಾರ್ಯವು ರಾಜ್ಯದ 34 ಚುನಾವಣಾ ಜಿಲ್ಲಾ ಕೇಂದ್ರಗಳಲ್ಲಿ ನಾಳೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಮತದಾನ ಕೇಂದ್ರ ಹಾಗೂ ಸುತ್ತಲಿನ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮವಹಿಸಲಾಗಿದೆ.

ರಾಜ್ಯದ 58,545 ಮತಗಟ್ಟೆಗಳಲ್ಲಿನ ಮತದಾರರು ಅಖಾಡದಲ್ಲಿರುವ 2615 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಬರೆದಿದ್ದು, ಫಲಿತಾಂಶ ನಾಳೆ ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭಗೊಳ್ಳಲಿದೆ. ಮಧ್ಯಾಹ್ನದ ವೇಳೆಗೆ ಹಣೆಬರಹ ಹೊರಬೀಳಲಿದೆ.

ಮತದಾನ ಕೇಂದ್ರಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಅವರ ಕರ್ತವ್ಯಕ್ಕೆ ಅನುಗುಣವಾಗಿ ಪ್ರವೇಶ ಪತ್ರ ಅಥವಾ ಗುರುತಿನ ಚೀಟಿಗಳನ್ನು ಚುನಾವಣಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾಧಿಕಾರಿಗಳು ನೀಡಿರುತ್ತಾರೆ. ನಿಯೋಜಿತಗೊಂಡ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿಗಳು ತಮಗೆ ನೀಡಿರುವ ಪಾಸ್‍ಗಳನ್ನು ಕಡ್ಡಾಯವಾಗಿ ಧರಿಸಿರಬೇಕು. ಭದ್ರತಾ ಸಿಬ್ಬಂದಿಗಳು ಕೇಳಿದಾಗ ತಕ್ಷಣ ತೋರಿಸಬೇಕು. ಅನಾವಶ್ಯಕ ಗೊಂದಲ, ವಾದಗಳಿಗೆ ಅವಕಾಶವಿರುವುದಿಲ್ಲ. ಹಾಗೂ ಮತ ಎಣಿಕಾ ಕೇಂದ್ರಕ್ಕೆ ಬರುವವರು ನೀರಿನ ಬಾಟಲ್, ಮೊಬೈಲ್, ಕಡ್ಡಿಪೆಟ್ಟಿಗೆ, ಇತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಒಳಗಡೆ ತರದಂತೆ ನಿಷೇಧಿಸಲಾಗಿದೆ. ಪ್ರತಿಯೊಬ್ಬರು ಚುನಾವಣಾ ಆಯೋಗದ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆಗೆ ಮತ್ತು ಈ ಸಮಯದಲ್ಲಿ ಪ್ರತಿಬಂಧಕಾಜ್ಞೆ ಜಾರಿಯಲ್ಲಿರುವುದರಿಂದ ಸಾರ್ವಜನಿಕರು ಕಾನೂನು, ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಕೋರಲಾಗಿದೆ.

[t4b-ticker]

You May Also Like

More From Author

+ There are no comments

Add yours