ಐದು ಗ್ಯಾರೆಂಟಿ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ: ಟಿ.ರಘುಮೂರ್ತಿ

 

ಚಿತ್ರದುರ್ಗ(chitradurga )ಮಾರ್ಚ್ 05: ಚುನಾವಣೆ ಸಂದರ್ಭದಲ್ಲಿ ಜನರಿಗೆ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿ ಮಾಡುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿತ್ತು. ವಿರೋಧ ಪಕ್ಷಗಳು ಈ ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡುವುದು ಸಾಧ್ಯವಿಲ್ಲ. ಒಂದು ವೇಳೆ ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕೆ ಟಿಪ್ಪಣಿ ಮಾಡುವುದರೊಂದಿಗೆ ನಗುವ ಮಾತುಗಳನ್ನು ಆಡಿದ್ದವು. ಆದರೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಅಧಿಕಾರಿ ಬಂದ ಕಾಂಗ್ರೆಸ್ ಸರ್ಕಾರ, ಕೊಟ್ಟ ಮಾತಿನಂತೆ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿ, ಟೀಕೆ ಟಿಪ್ಪಣಿ ಹಾಗೂ ಆರೋಪಗಳಿಗೆ ತಕ್ಕ ಉತ್ತರ ನೀಡಿದೆ ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದರು.

ತುರುವನೂರು ಗ್ರಾಮದ ಪ್ರೌಢಶಾಲಾ ಆವರಣದಲ್ಲಿ, ಮಂಗಳವಾರ ಆಯೋಜಿಸಲಾದ ಹೋಬಳಿ ಮಟ್ಟದ ಪಂಚ ಗ್ಯಾರೆಂಟಿ ಯೋಜನಗೆಳ ಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು‌.

ಗ್ಯಾರೆಂಟಿ ಯೋಜನೆಗಳ ಜಾರಿಯಿಂದ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲ. ಮತ್ತಷ್ಟು ಬಲಿಷ್ಠಾವಾಗಿದೆ. ಈ ಬಾರಿ ಬಜೆಟ್‌ನಲ್ಲಿ ಸುಮಾರು ರೂ.50 ಸಾವಿರ ಕೋಟಿಗೂ ಅಧಿಕ ಹಣವನ್ನು ಯೋಜನೆಗಳಿಗಾಗಿ ಮೀಸಲು ಇರಿಸಲಾಗಿದೆ. ಜೂನ್ 21 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು.

ಇದನ್ನೂ ಓದಿ: ವ್ಯವಹಾರದ ನಷ್ಟ ಸಾಲ ಕಟ್ಟಲಾರದೇ ನೇಣಿಗೆ ಶರಣು

ಇದರಿಂದ ರಾಜ್ಯದ ಎಲ್ಲಾ ವರ್ಗದ ಮಹಿಳೆಯರು ಉಚಿತವಾಗಿ ರಾಜ್ಯಾದ್ಯಂತ ಪ್ರಯಾಣ ಮಾಡುವ ಅವಕಾಶ ಲಭಿಸಿದೆ. ದೇಶದಲ್ಲೇ ಪ್ರಥಮ ಬಾರಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅನ್ನಭಾಗ್ಯ ಯೋಜನೆ ಜಾರಿ ಮಾಡಿ, ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೂ 5 ಕೆ.ಜಿ. ಉಚಿತ ಅಕ್ಕಿಯನ್ನು ನೀಡಿದರು. ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ 5 ಕೆ.ಜಿ. ಅಕ್ಕಿ ಪ್ರಮಾಣವನ್ನು 7 ಕೆ.ಜಿ.ಗೆ ಏರಿಸಲಾಗಿತ್ತು. ಆದರೆ ನಂತರ ಬಂದ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಚಿಂತನೆ ನಡೆಸಿತ್ತು. ದೇಶ ಕೋವಿಡ್ ಮಹಾಮಾರಿಗೆ ಸಿಲುಕಿದ್ದರಿಂದ ಯೋಜನೆಯನ್ನು ಮುಂದುವರಿಸಲಾಯಿತು. ಬಡವರಿಗೆ ಅನ್ನಭಾಗ್ಯ ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಸಂಜೀವಿನಿ ಆಯಿತು. ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರಕ್ಕೆ ಕೋರಿದಾಗ, ಮನವಿಯನ್ನು ತಿರಸ್ಕರಿಸಲಾಯಿತು. ಕೇಂದ್ರ ಸರ್ಕಾರದ ಈ ನಿಲುವನ್ನೇ ನೆಪ ಮಾಡಿ ಯೋಜನೆಯ ಜಾರಿಯನ್ನು ವಿಳಂಬ ಮಾಡಬಹುದಿತ್ತು. ಆದರೆ ಮುಖ್ಯಮಂತ್ರಿಗಳು ಜನರಿಗೆ ಕೊಟ್ಟ ಮಾತಿನಂತೆ 5 ಕೆ.ಜಿ. ಅಕ್ಕಿ ನೀಡಲು ಬದ್ದರಾಗಿದ್ದರು. ಕೇಂದ್ರ ಸರ್ಕಾರವನ್ನು ಟೀಕಿಸುತ್ತಾ ಕೂರುವ ಬದಲು ಆಹಾರ ಧಾನ್ಯಕ್ಕೆ ಪ್ರತಿಯಾಗಿ ಪ್ರತಿ ತಿಂಗಳು ರೂ.170 ಮೊತ್ತವನ್ನು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಜಮೆ ಮಾಡುವ ನಿರ್ಧಾರ ಕೈಗೊಂಡರು ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಇದನ್ನೂ ಓದಿ: ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಕೌಶಲ್ಯಾಭಿವೃದ್ಧಿಗೆ ಅರ್ಜಿ

ಚುನಾವಣೆ ಸಂದರ್ಭದಲ್ಲಿ ನೀಡುತ್ತಿದ್ದ ಆಶ್ವಾಸನೆಗಳನ್ನು ಈಡೇರಿಸುವ ಬದ್ದತೆಗೆ ಹೊಸ ರೂಪವಾಗಿ ಗ್ಯಾರೆಂಟಿ ಎಂಬ ಮಾತು ಪ್ರಚಲಿತವಾಗಿದೆ. ಮಾರುಕಟ್ಟೆಯಲ್ಲಿ ಖರಿದಿಸುವ ವಸ್ತುಗಳಿಗೆ ತಯಾರಕರು ಗ್ಯಾರಂಟಿ ಅವಧಿಯ ಕಾರ್ಡುಗಳನ್ನು ನೀಡುತ್ತಾರೆ. ಅದೇ ರೀತಿ ಸರ್ಕಾರವು ಪ್ರನಾಳಿಕೆಯಲ್ಲಿ ನೀಡಿದ ಆಶ್ವಾಸನೆಗಳನ್ನು ಈಡೇರಿಸುವ ಬದ್ದತೆ ತೋರಬೇಕು. ತುರುವನೂರು ಹೋಬಳಿಯಲ್ಲಿ ಶೇ.95 ರಷ್ಟು ಎಲ್ಲಾ ಗ್ಯಾರೆಂಟೆ ಯೋಜನೆಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ. ದಾಖಲೆಗಳ ಕೊರತೆ ಹಾಗೂ ತಾಂತ್ರಿಕ ಕಾರಣಗಳಿಂದ ಹಲವು ಜನರ ಅರ್ಜಿಗಳಲ್ಲಿ ತೊಂದರೆ ಉಂಟಾಗಿದೆ. ಇದನ್ನು ಸಹ ಸರಿ ಪಡಿಸಿ‌ ನೂರಕ್ಕೆ‌ ನೂರರಷ್ಟು ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಶಾಸಕ ಟಿ.ರಘುಮೂರ್ತಿ ಹೇಳಿದರು.

ತಹಶೀಲ್ದಾರ್ ಡಾ.ನಾಗವೇಣಿ ಪ್ರಸ್ತಾವಿಕವಾಗಿ ಮಾತನಾಡಿ, ಹೊಬಳಿಯಲ್ಲಿ ಅನ್ನ ಭಾಗ್ಯ ಯೋಜನೆಯಡಿ 11,812 ಫಲಾನುಭವಿಗಳ ಪೈಕಿ 11,679 ಜನರಿಗೆ, ಗೃಹಲಕ್ಷ್ಮೀ ಯೋಜನೆಯಡಿ 9832 ಫಲಾನುಭವಿಗಳ ಪೈಕಿ 9,784, ಗೃಹಜ್ಯೋತಿ ಯೋಜನೆಯಡಿ 9247 ಫಲಾನುಭವಿಗಳ ಪೈಕಿ 8641 ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ.
ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಗಾಗಿ ಹೋಬಳಿಯಲ್ಲಿ 3939 ಯುವಕರು ಅರ್ಜಿ ಸಲ್ಲಿಸಿದ್ದಾರೆ. ಶಕ್ತಿ ಯೋಜನೆಯ ಹೋಬಳಿಯಲ್ಲಿ ಯಶಸ್ವಿಯಾಗಿದೆ. ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರ ಅಭ್ಯುದಯಕ್ಕೆ ಪೂರಕವಾಗಿವೇ ಎಂದರು.

ಫಲಾನುಭವಿಗಳಾದ ಬೆಳಗಟ್ಟ ಗ್ರಾಮದ ಹೇಮಲತಾ, ತುರುವನೂರು ಗ್ರಾಮದ ಲಲಿತಮ್ಮ ಗ್ಯಾರೆಂಟಿ ಯೋಜನೆಗಳ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾತು. ಮಹಿಳಾ ದಿನಾಚರಣೆ ಅಂಗವಾಗಿ ಗ್ರಾಮದ ಪ್ರೌಢಶಾಲಾ ವಿಧ್ಯಾರ್ಥಿನಿಯರಿಗೆ ಏರ್ಪಡಿಸಲಾದ ಪ್ರಬಂದ,ಚಿತ್ರಕಲೆ,ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ವೇದಿಕೆಯಲ್ಲಿ ಸನ್ಮಾನಿಸಿ ಪ್ರಮಾಣ ಪತ್ರ ವಿತರಿಸಲಾಯಿತು. ವಕೀಲರಾದ ದಿಲ್‌ಶಾದ್ ಮಹಿಳಾ ಕಾನೂನು ಹಾಗೂ ಮಹಿಳೆಯರ ಸುರಕ್ಷತೆ ಕುರಿತು ಉಪನ್ಯಾಸ ನೀಡಿದರು.

ಇದನ್ನೂ ಓದಿ: ಜಿಲ್ಲೆಯ ಎಲ್ಲ ಮತಗಟ್ಟೆಗಳನ್ನು ಸಜ್ಜುಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆ

ಜಿ.ಪಂ. ಮಾಜಿ ಸದಸ್ಯ ಬಾಬುರೆಡ್ಡಿ, ತಾ.ಪಂ.ಇ.ಓ.ಅನಂತರಾಜು, ತುರುವನೂರು ಗ್ರಾ.ಪಂ.ಅಧ್ಯಕ್ಷೆ ದೀಪಾ.ಪಿ ಮಹೇಶ್, ಬೆಳಗಟ್ಟ ಗ್ರಾ.ಪಂ.ಅಧ್ಯಕ್ಷೆ ಮಂಜುಶ್ರೀ ಪಾಲಯ್ಯ,ಕೂನಬೇವು ಗ್ರಾ.ಪಂ.ಅಧ್ಯಕ್ಷ ಜಿ‌.ಪಿ.ಅನಿಲ್ ಕುಮಾರ್, ಮಾದನಾಯಕನಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಕವಿತಾ ನಾಗರಾಜ್, ಮುದ್ದಾಪುರ ಗ್ರಾ.ಪಂ.ಅಧ್ಯಕ್ಷೆ ಮಂಗಳಾ,‌ಚಿಕ್ಕಗೊಂಡನಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಮಹಾಂತಮ್ಮ, ಸಿಡಿಪಿಓ ಸುಧಾ, ವೈದ್ಯಾಧಿಕಾರಿ ಸುಶ್ಮಿತಾ ಉಪಸ್ಥಿತರಿದ್ದರು. ಕೂನಬೇವು ಪಿಡಿಓ ಧನಂಜಯ ಸ್ವಾಗತಿಸಿದರು. ತುರುವನೂರು ಪಿಡಿಓ ಖಲೀಂ ಕಾರ್ಯಕ್ರಮ ನಿರೂಪಿಸಿದರು.

[t4b-ticker]

You May Also Like

More From Author

+ There are no comments

Add yours