ಮಧ್ಯಪ್ರದೇಶ ರಾಜಕೀಯದಲ್ಲಿ ಭವಿಷ್ಯದಲ್ಲಿ ಬದಲಾವಣೆ ತರುತ್ತೇವೆ:ಡಿಸಿಎಂ ಡಿ.ಕೆ.ಶಿವಕುಮಾರ್

 

ಭೋಪಾಲ್, ಜೂನ್. 11: ಮುಂಬರುವ ಮಧ್ಯಪ್ರದೇಶ ಚುನಾಚಣೆ ಬಗ್ಗೆ ಕಾಂಗ್ರೆಸ್ ರಾಜಕೀಯ ನಾಯಕರು ಗಂಭೀರವಾಗಿದ್ದು, ಈ ಬಾರಿ ಬಹುಮತ ಪಡೆದು ಸರ್ಕಾರ ರಚಿಸುವ ವಿಶ್ವಾಸದಲ್ಲಿದ್ದಾರೆ. ಇದೇ ಭರವಸೆಯನ್ನು ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಕೂಡ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ರಾಜಕೀಯದ ಭವಿಷ್ಯವನ್ನು ಪಕ್ಷ ಬದಲಾಯಿಸಲಿದೆ ಎಂದು ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶದ ದತಿಯಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ‘ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ ಅನ್ಯಾಯವಾಗಿದ್ದು, ಪಕ್ಷದ ಕಾರ್ಯಕರ್ತರ ಮೇಲೆ ಸಾಕಷ್ಟು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ನನ್ನ ಪಕ್ಷದ ಎಲ್ಲಾ ಕಾರ್ಯಕರ್ತರು ಹೇಳುತ್ತಿದ್ದಾರೆ. ಇದು ಅನ್ಯಾಯವಾಗಿದೆ” ಎಂದು ಹೇಳಿದ್ದಾರೆ.

ನಾನು ನನ್ನ ಪಕ್ಷದ ಕಾರ್ಯಕರ್ತರಿಗೆ ಧೈರ್ಯವಾಗಿ ಈ ಬಾರಿ ಎಲ್ಲವನ್ನು ಎದುರಿಸಿ ಎಂದು ಹೇಳಿದ್ದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ನೇತೃತ್ವದಲ್ಲಿ ನಾವು ಮತ್ತೆ ಪುಟಿದೇಳುತ್ತೇವೆ. ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ ಮತ್ತು ಮಧ್ಯಪ್ರದೇಶ ರಾಜಕೀಯದಲ್ಲಿ ಭವಿಷ್ಯದಲ್ಲಿ ಬದಲಾವಣೆ ತರುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಮೇ 29 ರಂದು ಮುಂಬರುವ ಮಧ್ಯಪ್ರದೇಶ ಚುನಾವಣೆಯ ಸಿದ್ಧತೆಗಳ ಪರಿಶೀಲನೆಯ ಸಭೆ ನಡೆದಿತ್ತು. ಸಭೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ನಂತರ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 150 ಸ್ಥಾನಗಳನ್ನು ಭರ್ಜರಿಯಾಗಿ ಗೆಲ್ಲಲಿದೆ ಎಂದು ಹೇಳಿದ್ದರು.

ಕರ್ನಾಟಕದಲ್ಲಿ ನಮ್ಮ ಪಕ್ಷದ ಅದ್ಭುತ ಗೆಲುವಿನ ನಂತರ ನಾವು ಮಧ್ಯಪ್ರದೇಶದಲ್ಲಿಯೂ 150 ಸ್ಥಾನಗಳೊಂದಿಗೆ ಅಭೂತಪೂರ್ವವಾಗಿ ಗೆಲುವು ದಾಖಲಿಸುತ್ತೇವೆ ಎಂದು ಅವರು ತಿಳಿಸಿದ್ದರು. ಇನ್ನು, ಪರಿಶೀಲನಾ ಸಭೆಯ ನಂತರ ರಾಹುಲ್ ಗಾಂಧಿ ಅವರು ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ಹೊರಹಾಕಿದರು ಮತ್ತು ಅಲ್ಲಿ ಪಕ್ಷ 150 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ತಿಳಿಸಿದ್ದರು.

ನಾವು ಇದೀಗ ಅತ್ಯಂತ ವಿವರವಾದ ಸಭೆ ನಡೆಸಿದ್ದೇವೆ. ನಮ್ಮ ಆಂತರಿಕ ಮೌಲ್ಯಮಾಪನವು ಕರ್ನಾಟಕದಲ್ಲಿ 136 ಸ್ಥಾನಗಳನ್ನು ಪಡೆದಿರುವುದರಿಂದ ನಾವು ಈಗ ಮಧ್ಯಪ್ರದೇಶದಲ್ಲಿ 150 ಸ್ಥಾನಗಳನ್ನು ಪಡೆಯಲಿದ್ದೇವೆ ಎಂದು ಹೇಳುತ್ತದೆ. ನಾವು ಕರ್ನಾಟಕದಲ್ಲಿ ಮಾಡಿದ್ದನ್ನು ನಾವು ಮಧ್ಯಪ್ರದೇಶದಲ್ಲಿಯೂ ಮಾಡುತ್ತೇವೆ” ಎಂದು ಹೇಳಿದ್ದರು.

ಮಧ್ಯಪ್ರದೇಶದಲ್ಲಿ 2018 ರ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ 114 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು ಮತ್ತು ಬಿಜೆಪಿ 109 ಸ್ಥಾನಗಳನ್ನು ಪಡೆದುಕೊಂಡಿತು. ಆದರೆ, 2020 ರಲ್ಲಿ, ಕೆಲವು ಶಾಸಕರ ರಾಜೀನಾಮೆಯೊಂದಿಗೆ ಕಾಂಗ್ರೆಸ್ ಸರ್ಕಾರ ಬಹುಮತವನ್ನು ಕಳೆದುಕೊಂಡಿತು. ಇದಾದ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿತು ಮತ್ತು ಶಿವರಾಜ್ ಸಿಂಗ್ ಚೌಹಾಣ್ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತಿದ್ದಾರೆ.

[t4b-ticker]

You May Also Like

More From Author

+ There are no comments

Add yours