ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಅಮಿತ್ ಷಾ ಹೇಳಿದ್ದೇನು?

 

ಬೆಂಗಳೂರು,: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.

ಜೆಡಿ(ಎಸ್) ಜೊತೆಗಿನ ಮೈತ್ರಿಯ ಮಾತುಕತೆ ಕೇವಲ ವದಂತಿಯಾಗಿದೆ ಎಂದು ಅವರು ಹೇಳಿದ್ದಾರೆ. ಜೆಡಿ(ಎಸ್) ಜೊತೆ ಸಂಬಂಧ ಹೊಂದಿರುವವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಾರೆ ಎಂದು ವದಂತಿಗಳನ್ನು ಹರಡುತ್ತಿದ್ದಾರೆ.

ಬಿಜೆಪಿ ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತದೆ. ರಾಜ್ಯದಲ್ಲಿ ಸರ್ಕಾರ ರಚಿಸುತ್ತದೆ ಎಂದು ನಾನು ರಾಜ್ಯದ ಜನತೆಗೆ ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಶಾ, ಕಾಂಗ್ರೆಸ್‌ಗೆ ಅಧಿಕಾರ ಪಡೆಯುವುದು ಭ್ರಷ್ಟಾಚಾರದ ಒಂದು ಮಾರ್ಗವಾಗಿದೆ. ಆದರೆ, ನಮಗೆ ಅದು ಜನರ ಜೀವನವನ್ನು ಹಸನುಗೊಳಿಸುವುದಾಗಿದೆ. ಇತ್ತೀಚಿನ 7 ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ 5 ರಾಜ್ಯಗಳಲ್ಲಿ ಗೆದ್ದಿದ್ದು, 6 ರಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ ಎಂದರು.

[t4b-ticker]

You May Also Like

More From Author

+ There are no comments

Add yours