ರಾಜ್ಯದಲ್ಲಿ ನಾಳೆ ರಜೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು

 

ತುಮಕೂರು: ಅಯೋಧ್ಯೆಯಲ್ಲಿ ನಾಳೆ ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವಂತೆ ಬಿಜೆಪಿ ನಾಯಕರು, ಹಿಂದೂ ಸಂಘಟನೆ ಮುಖಂಡರು ಒತ್ತಾಯಿಸಿದ್ದರು. ಇದೀಗ ಈ ಬಗ್ಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ. ಆದರೆ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ನಾಳೆ ವಿಶೇಷ ಪೂಜೆ ಇರಲಿದೆ ಎಂದು ತಿಳಿಸಿದರು.

ನಾಳೆ ದಾಸೋಹ, ಪಾನಕ, ಫಲಹಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ನಾಳೆ ರಾಜ್ಯದಲ್ಲಿ ರಜೆ ಘೋಷಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ರೈತರ ಸಾಲ ಮೇಲಿನ ಬಡ್ಡಿ ಮನ್ನಾ ,ಯಾರಿಗೆಲ್ಲ ಮನ್ನಾ ಆಗುತ್ತೆ

ನಾಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದೆ. ವಿವಿಧ ರಾಜ್ಯಗಳು ಸರ್ಕಾರಿ ರಜೆ ಘೋಷಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ನಾಳೆ ರಜೆ ಇಲ್ಲ ಎಂದು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours