ಭೂ ಕಬಳಿಕೆ ಆರೋಪದ ಬಗ್ಗೆ ಸಚಿವ ಸುಧಾಕರ್ ಹೇಳಿದ್ದೇನು‌.

 

ಬೆಂಗಳೂರು: ಸಚಿವ ಡಾ.ಡಿ.ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಸಚಿವರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಓದಿ: ಗಣೇಶ್ ಮೂರ್ತಿ ಸ್ಥಾಪಿಸಲು ಏನೇನು ರೂಲ್ಸ್ ,ಡಿಸಿ ಹೇಳಿದ್ದೇನು

ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವರ ನಿವಾಸಕ್ಕೆ ಆಗಮಿಸಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾದ ಸುಧಾಕರ್, ತನ್ನ ವಿರುದ್ಧ ದಾಖಲಾಗಿರುವ ಎಫ್ ಐಆರ್ ರಾಜಕೀಯ ಕುತಂತ್ರದಿಂದ ಅನಗತ್ಯವಾಗಿ ನನ್ನ ವಿರುದ್ಧ ಆರೋಪ ಮಾಡಿ ಪ್ರಕರಣ ದಾಖಲಿಸಲಾಗಿದೆ.ಇದರಲ್ಲಿ ಯಾವುದೇ ಉರುಳಿಲ್ಲ. ಆ ಜಾಗ ಹತ್ತು ವರ್ಷಗಳ ಹಿಂದೆ ಕಾನೂನು ಬದ್ದವಾಗಿ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.

ಓದಿ:ಅಂಗನವಾಡಿ ಕಾರ್ಯಕರ್ತೆರು ಹಾಗೂ ಸಹಾಯಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ರಿಲೀಸ್

ಸಚಿವ ಸುಧಾಕರ್ ವಿರುದ್ಧ ಭೂಕಬಳಿಕೆ, ಜಾತಿ ನಿಂದನೆ ಆರೋಪ ಕೇಳಿಬಂದಿದ್ದು, ಸುಬ್ಬಮ್ಮ ಎಂಬುವವರು ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸಚಿವ ಸುಧಾಕರ್ ಮೋಸದಿಂದ ಜಮೀನು ಕಬಳಿಕೆ ಮಾಡಿದ್ದಾರೆ. ಯಲಹಂಕ ಗ್ರಾಮದ ಸರ್ವೆ ನಂಬರ್ 108/1ರ ಜಮೀನು ಕಬಳಿಸಿದ್ದಾರೆ. ಕೇಸ್ ಕೋರ್ಟ್ ನಲ್ಲಿದ್ದರೂ ಕೂಡ ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

[t4b-ticker]

You May Also Like

More From Author

+ There are no comments

Add yours