Breaking News

Friday, April 19 2024

ಕಾರ್ಯಕರ್ತರ ಜೊತೆ ಮೋದಿ ಸಂವಾದದಲ್ಲಿ ಚರ್ಚಿಸಿದ್ದು ಏನು

 

ಕಾರ್ಯಕರ್ತರ ಜತೆ ಸಂವಾದ
ಬೆಂಗಳೂರು,ಏ.೨೭ ಕಾಂಗ್ರೆಸ್ ಅಂದರೆ ಕುಟುಂಬವಾದ,ಮತ್ತು ಭ್ರಷ್ಟಾಚಾರ ಎಂದು ಕಾಂಗ್ರೆಸ್ ಪಕ್ಷದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು,ಈಗಾಗಲೇ ಎಕ್ಸ್‌ಪೈರ್ ಆಗಿರುವ ಕಾಂಗ್ರೆಸ್ ಪಕ್ಷ ನೀಡುವ ಗ್ಯಾರೆಂಟಿಗೆ ಅರ್ಥ ಇಲ್ಲ ಎಂದು ಕಾಂಗ್ರೆಸ್‌ನ ಗ್ಯಾರೆಂಟಿ ಯೋಜನೆಗಳ ಬಗ್ಗೆ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಸದಾ ಸುಳ್ಳಿನ, ಭರವಸೆ ನೀಡುತ್ತದೆ. ವಾರೆಂಟಿಯೇ ಮುಗಿದು ಹೋಗಿರುವ ಕಾಂಗ್ರೆಸ್ ನೀಡುತ್ತಿರುವ ಗ್ಯಾರೆಂಟಿಗೆ ಬೆಲೆ ಎಲ್ಲಿದೆ ಎಂದು ವ್ಯಂಗ್ಯವಾಡಿದರು.
ರಾಜ್ಯ ವಿಧಾನಸಭೆಗೆ ಇನ್ನು ೧೩ ದಿನ ಬಾಕಿ ಇರುವಾಗ ರಾಜ್ಯದ ಲಕ್ಷಾಂತರ ಕಾರ್ಯಕರ್ತರೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಿದ ಪ್ರಧಾನಿ ನರೇಂದ್ರಮೋದಿ ಅವರು ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್, ಕಾಂಗ್ರೆಸ್‌ನ ಗ್ಯಾರೆಂಟಿಕಾರ್ಡ್ ಗುರಿಯಾಗಿಸಿ ವಾಗ್ದಾಳಿ ನಡೆಸಿ ಕಾಂಗ್ರೆಸ್ ನಾಯಕರು
ಭ್ರಷ್ಟಾಚಾರಕ್ಕಾಗಿ ಗ್ಯಾರೆಂಟಿ ಕೊಡುತ್ತಿದ್ದಾರೆ. ಅವರ ಸುಳ್ಳು ಭರವಸೆಗಳಿಗೆ ಯಾರೂ ಮರುಳಾಗಬೇಡಿ. ಅಭಿವೃದ್ಧಿಗಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ ಎಂದು ಕರೆ ನೀಡಿದರು.ರಾಜ್ಯಕ್ಕೆ ಈ ತಿಂಗಳ ೧೯ ರಿಂದ ಚುನಾವಣಾ ಪ್ರಚಾರಕ್ಕೆ ಆಗಮಿಸಲಿರುವ ಮೋದಿ ಅವರು, ತಮ್ಮ ಪ್ರಚಾರಕ್ಕೆ ಪೂರ್ವಭಾವಿ ತಾಲೀಮು ಎಂಬಂತೆ ಇಂದು ಬಿಜೆಪಿಯ ಲಕ್ಷಾಂತರ ಕಾರ್ಯಕರ್ತರ ಜತೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೂ ಉತ್ತರ ನೀಡಿ, ಮುಂದಿನ ೧೦ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಏನೆಲ್ಲ ಜವಾಬ್ದಾರಿಗಳನ್ನು ನಿಭಾಯಿಸಬೇಕು ಎಂಬ ಬಗ್ಗೆ ಮಾರ್ಗದರ್ಶನ ಮಾಡಿದರು.
ಈ ಸಂವಾದದಲ್ಲಿ ಕಾರ್ಯಕರ್ತರ ಜತೆ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಎಲ್ಲ ಪ್ರಮುಖ ನಾಯಕರು ಅಭ್ಯರ್ಥಿಗಳು ಪಾಲ್ಗೊಂಡಿದ್ದರು.
ಪೂರ್ಣ ಬಹುಮತದಿಂದ ಅಧಿಕಾರಕ್ಕೆ ತನ್ನಿ:
ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸರ್ಕಾರವನ್ನು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.ಡಬಲ್ ಇಂಜಿನ್ ಸರ್ಕಾರದಿಂದ ಆಗುವ ಯೋಜನೆಗಳನ್ನು ಜನರ ಮನೆ ಮನೆಗೆ ತಲುಪಿಸಿ ಬಿಜೆಪಿ ಪಕ್ಷವನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕೇಂದ್ರ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು.ಬಿಜೆಪಿ ಪಕ್ಷಕ್ಕೆ ಬಡ ಜನರ ಬಗ್ಗೆ ಅಪಾರವಾದ ಕಾಳಜಿ ಇದೆ ಅವರ ಏಳಿಗೆಗಾಗಿ ಶ್ರಮಿಸುತ್ತಿರುವುದಾಗಿ ಪ್ರಧಾನಿ ತಿಳಿಸಿದ್ದಾರೆ.
ಬಡತನ ಮುಕ್ತ ದೇಶದ ಗುರಿ:

ಭಾರತವನ್ನು ಮುಂದಿನ ೫೦ ವರ್ಷಗಳಲ್ಲಿ ಬಡತನ ಮುಕ್ತ ಮಾಡುವ ಉದ್ದೇಶವನ್ನು ಹೊಂದಲಾಗಿದೆ. ಈ ಎಲ್ಲ ಮಾಹಿತಿಯನ್ನು ಜನರಿಗೆ ತಲುಪಿಸಬೇಕು ಆ ಮೂಲಕ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸಬೇಕು ಎಂದು ಅವರು ಹೇಳಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರ ಹಿಡಿಯಬೇಕು ಹೀಗಾಗಿ ಎಲ್ಲರೂ ಒಗ್ಗೂಡಿ ಶ್ರಮಿಸಬೇಕು. ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಪ್ರತಿಯೊಬ್ಬ ರೈತರಿಗೆ ಹತ್ತು ಸಾವಿರ ನೀಡಲಾಗುತ್ತಿದೆ. ಸರ್ಕಾರದಿಂದ ಹೆಚ್ಚು ಲಾಭ ಇದೆ ಎನ್ನುವುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಅವರು ತಿಳಿಸಿದರು
ಡಬಲ್ ಇಂಜಿನ್ ಸರ್ಕಾರ ಇಲ್ಲದಿದ್ದರೆ ರಾಜ್ಯದ ಮೇಲೆ ಹೊಡೆತ ಬೀಳಲಿದೆ. ಹೀಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ ಎಂದು ಅವರು ಮನವಿ ಮಾಡಿದರು.ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಭಾರತ ಮುಂದಿದೆ. ಎಫ್‌ಡಿಐ ಎಂದರೆ ಫಸ್ಟ್ ಡೆವಲಪ್ಮೆಂಟ್ ಇಂಡಿಯಾ ಎಂದು ತಮ್ಮದೇ ರೀತಿಯಲ್ಲಿ ವ್ಯಾಖ್ಯಾನ ಮಾಡಿದರು. ಬುಡಕಟ್ಟು ಜನರ ಅಭಿವೃದ್ಧಿ ಬಿಜೆಪಿಯ ಗುರಿಯಾಗಿದೆ.
ಕರ್ನಾಟಕದ ಯುವಪೀಳಿಗೆಯ ಭವಿಷ್ಯದ ಬಗ್ಗೆ ಯೋಚಿಸಬೇಕಾಗಿದೆ. ಅದಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಬಿಜೆಪಿಗೆ ಯಾವುದೇ ಶಾರ್ಟ್‌ಕಟ್ ಇಲ್ಲ. ದೇಶದ ಅಭಿವೃದ್ಧಿಗಾಗಿ ಬಿಜೆಪಿ ಸದಾ ಶ್ರಮಿಸುತ್ತಿದೆ ಎಂದು ತಿಳಿಸಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಬಡವರಿಗೆ ಉಚಿತವಾಗಿ ಪಡಿತರ ನೀಡಿದ್ದೇವೆ, ಬಡವರ ಬಗ್ಗೆ ಅಪಾರ ಕಾಳಜಿ ಇದೆ. ಅವರ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದ್ದೇವೆ. ದೇಶದಲ್ಲಿ ೨೫ ವರ್ಷಗಳ ಹಿಂದೆ ವೈದ್ಯರ ಸಂಖ್ಯೆ ಬಹಳ ಕಡಿಮೆ ಇತ್ತು .ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ವೈದ್ಯರ ಸಂಖ್ಯೆ ಬಹಳಷ್ಟು ಹೆಚ್ಚಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಡಬಲ್ ಸರ್ಕಾರ ಇದ್ದರೆ ಅಭಿವೃದ್ಧಿ ಸುಗಮವಾಗಿ ನಡೆಯಲಿದೆ ಎಂದು ಹೇಳಿದ ಅವರು, ಕರ್ನಾಟಕ ಹನುಮನ ಜನ್ಮಸ್ಥಳ ಹಾಗೂ ಜೊತೆಗೆ ಸಾಂಸ್ಕೃತಿಕ ರಾಜ್ಯವಾಗಿದೆ ಎಂದು ಗುಣಗಾನ ಮಾಡಿದ್ದಾರೆ.
ಆಧ್ಯಾತ್ಮಿಕತೆ,, ಸಮಾಜ ಒಗ್ಗೂಡಿಸಿಕೊಂಡು ಹೋಗುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಾಗುತ್ತಿದೆ ಕನಕದಾಸರು ,ಶಿವಶರಣರ ಬಗ್ಗೆ ಉಲ್ಲೇಖ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕನ್ನಡ ಭಾಷೆ ಸಮೃದ್ಧ ಸಾಹಿತ್ಯವನ್ನು ಹೊಂದಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಕುವೆಂಪು ಅವರ ಸ್ಮರಿಸಿದ ಪ್ರಧಾನಿ ಅವರು, ಕರ್ನಾಟಕದ ಜನರನ್ನು ದಶಕದಿಂದಲೂ ನಾನು ನೋಡುತ್ತಿದ್ದೇನೆ .ರಾಜಕೀಯಕ್ಕೆ ಬರುವ ಮೊದಲು ಹಲವು ಬಾರಿ ಕರ್ನಾಟಕಕ್ಕೆ ಬಂದಿದ್ದೇನೆ. ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಬದಲಾವಣೆ ಸಾಧ್ಯ ಎಂದು ಅವರು ಹೇಳಿದ್ದಾರೆ.
೨೦ ಏಮ್ಸ್ ನಿರ್ಮಾಣ:
ದೇಶದಲ್ಲಿ ೨೦ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳು – ಏಮ್ಸ್ ಗಳು ಕಾರ್ಯ ನಿರ್ವಹಿಸುತ್ತವೆ. ಮೆಡಿಕಲ್ ಕಾಲೇಜುಗಳ ನಿರ್ಮಾಣ ಹೆಚ್ಚಳ ಮಾಡಲಾಗಿದೆ. ೬,೦೦೦ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳ ನಿರ್ಮಾಣವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪ್ರತಿಯೊಬ್ಬರ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ, ಮನೆ ವಿದ್ಯುತ್, ಎಲ್ಪಿಜಿ ಕನೆಕ್ಷನ್, ನೀರು ಸೌಲಭ್ಯ ಪ್ರತಿಯೊಬ್ಬರ ಮನೆ ಬಾಗಿಲು ಸೌಲಭ್ಯ ತಲುಪುತ್ತಿದೆ, ನಮ್ಮ ಸರ್ಕಾರದ ಸಾಧನೆಗಳನ್ನ ಜನರ ಮುಂದಿಡಿ ಎಂದು ಕಾರ್ಯಕರ್ತರಿಗೆ ಅವರು ಮನೆಗೆ ಮಾಡಿದರು.

ಗೆಲುವಿಗೆ ೧೦ ದಿನ ಮೋದಿ ಟಾಸ್ಕ್
ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ೧೦ ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಅವಧಿಯಲ್ಲಿ ಕಾರ್ಯಕರ್ತರು ಏನು ಮಾಡಬೇಕು ಎಂಬ ಕುರಿತು ಪ್ರಧಾನಿ ನರೇಂದ್ರಮೋದಿ ಅವರು ಹತ್ತು ಹಲವು ಸಲಹೆಗಳನ್ನು ನೀಡಿದ್ದಾರೆ.ಗೆಲುವಿಗಾಗಿ ೧೦ ಮಂದಿ ಪುರುಷರು ಹಾಗೂ ೧೦ ಮಂದಿ ಮಹಿಳಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಅವರ ಬಳಿ ಬಿಜೆಪಿಯಿಂದ ನೀವು ಏನು ಬಯಸುತ್ತೀರಿ, ಮನೆಂiiಲ್ಲಿ ಎಷ್ಟು ಜನರಿದ್ದೀರಿ, ಸಮಸ್ಯೆಗಳ ಬಗ್ಗೆ ವಿವರಿಸಬೇಕು.ದೇಶದಲ್ಲಿ ಮಾರಕ ಕೊರೊನಾ ಬಳಿಕ ಎಲ್ಲ ರಾಷ್ಟ್ರಗಳ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಆದರೆ, ಭಾರತ ಉತ್ತಮ ಆರ್ಥಿಕತೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.ಮುಂದಿನ ೫೦ ವರ್ಷಗಳ ಅವಧಿಯಲ್ಲಿ ಬಡತನ ನಿರ್ಮೂಲನೆ, ಮೂಲಭೂತ ಸೌಕರ್ಯ, ಉದ್ಯೋಗ ಸೃಷ್ಟಿ, ಕೃಷಿಕರಿಗೆ ಸೌಲಭ್ಯಗಳನ್ನು ಒದಗಿಸುವ ಕಡೆ ಆಧ್ಯತೆ ನೀಡುತ್ತೇವೆ.ಡಬಲ್ ಇಂಜಿನ್ ಸರ್ಕಾರದ ಬಗ್ಗೆಯೂ ಪ್ರಸ್ತಾಪಿಸಿರುವ ಪ್ರಧಾನಿಗಳು ವಿಕಾಸದ ಕಡೆಗೆ ದಾಪುಗಾಲು ಹಾಕುತ್ತಿದ್ದೇವೆ. ಡಬಲ್ ಇಂಜಿನ್ ಸರ್ಕಾರವಿರುವ ರಾಜ್ಯಗಳಲ್ಲಿ ಅಭಿವೃದ್ಧಿ, ಬಡತನ ವೇಗವಾಗಿ ನಿರ್ಮೂಲನೆಯಾಗುತ್ತಿದೆ.ಬಿಜೆಪಿ ಸರ್ಕಾರ ಆಡಳಿತವಿರದ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ ಯಾವುದೇ ಯೋಜನೆ ಸಫಲವಾಗಿಲ್ಲ, ಹೀಗಾಗಿ, ಜನರಿಗೆ ಯೋಜನೆ ತಲುಪಲು ಕ್ರಮಕೈಗೊಳ್ಳಲಾಗಿದೆ.ಕಿಸಾನ್ ಸಮ್ಮಾನ್ ನಿಧಿಯಡಿಯಲ್ಲಿ ರಾಜ್ಯಸರ್ಕಾರದ ೪ ಸಾವಿರ ರೂ, ಕೇಂದ್ರ ಸರ್ಕಾರದಿಂದ ೧೦ ಸಾವಿರ ರೂ.ಗಳನ್ನು ಜನರಿಗೆ ತಲುಪಿಸಲಾಗುತ್ತಿದೆ.೨೦೧೪ಕ್ಕೂ ಮುನ್ನ ಆವಾಜ್ ಯೋಜನೆಯಡಿ ಮನೆ ನಿರ್ಮಿಸಲು ೩೦೦ಕ್ಕೂ ಅದಿಕ ದಿನ ಬೇಕಾಗುತ್ತಿತ್ತು, ಈಗ ೧೦೦ ದಿನಗಳಲ್ಲಿ ನಿರ್ಮಾಣವಾಗುತ್ತಿದೆ. ಈ ಮೊದಲು ೭೦ ರಿಂದ ೮೦ ಸಾವಿರ ನೀಡಲಾಗುತ್ತಿತ್ತು. ಈಗ ಈ ಮೊತ್ತವನ್ನು ೧ ಲಕ್ಷ ೩೦ ಸಾವಿರಕ್ಕೆ ಏರಿಸಲಾಗಿದೆ. ಮೊದಲು ೪ ಗೋಡೆ ನಿರ್ಮಿಸಿಕೊಳ್ಳುತ್ತಿದ್ದರು, ಆದರೆ, ಈಗ ಮನೆಯಲ್ಲಿ ಶೌಚಾಲಯ, ವಿದ್ಯುತ್ ಸಂಪರ್ಕ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ.ವೈದ್ಯಕೀಯ ಕಾಲೇಜುಗಳ ಸಂಖ್ಯೆಯೂ ಏರಿಕೆಯಾಗಿದೆ. ಭ್ರಷ್ಟಾಚಾರದ ವಿರುದ್ಧ ಹೋರಾಟ, ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿತ್ತು

 

[t4b-ticker]

You May Also Like

More From Author

+ There are no comments

Add yours

100 ಕ್ಕೆ 100 ರಷ್ಟು ಜಗದೀಶ್ ಶೆಟ್ಟರ್ ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

ಶಾಸಕ ಟಿ.ರಘುಮೂರ್ತಿ ಸಮ್ಮುಖದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಬೊಗಳರಹಟ್ಟಿ ಜಯ್ಯಣ್ಣ

[t4b-ticker]