ಬಿಜೆಪಿಗೆ ರಾಜೀನಾಮೆ ನೀಡಿ ಜನಾರ್ಧನ ರೆಡ್ಡಿ ಪಾಳಯಕ್ಕೆ ಸೇರಿದ ಆ ನಾಯಕ ಯಾರು?

 

ಳ್ಳಾರಿ(ಡಿ.30): ಮಾಜಿ ಸಚಿವ ಜನಾರ್ದನ ರೆಡ್ಡಿ ಬೆಂಬಲಿಸಿ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ. ಹೌದು, ಬಿಜೆಪಿಯ ಮತ್ತೊಬ್ಬ ಮುಖಂಡ ರಾಜೀನಾಮೆ ನೀಡಿದ್ದಾರೆ. ನಗರದ ಕೌಲ್ ಬಜಾರ್ ಬಿಜೆಪಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಮೊಹಮ್ಮದ್ ಖದೀರ್ ರಾಜೀನಾಮೆ ನೀಡಿದ್ದಾರೆ.

ದಿನಕ್ಕೊಂದು ಬೆಳವಣಿಗೆ, ದಿನಕ್ಕೊಬ್ಬ ಸ್ಥಳೀಯ ನಾಯಕರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ. ಈ ಮಧ್ಯೆ ಕಲ್ಯಾಣ ಕರ್ನಾಟಕದ ಮಧ್ಯೆ ಭಾಗವಾದ ಸಿಂಧನೂರಿನಲ್ಲಿ‌ ಜನವರಿ 6 ಮತ್ತು‌ ಗಾಲಿ ಜನಾರ್ದನ ರೆಡ್ಡಿ ಹುಟ್ಟು ಹಬ್ಬ ಜನವರಿ‌ 11ನೇ ತಾರೀಖು ಬಳ್ಳಾರಿಯಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಇದ್ದು, ಸದ್ಯ ಜನಾರ್ದನ ರೆಡ್ಡಿ ಅವರ ಹೊಸ ಪಕ್ಷದ ಸದ್ಯದ ಬೆಳವಣಿಗೆಯ ಸ್ಥಿತಿಗತಿ. ಒಂದು ಕಾಲದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ ಇದೀಗ ತಮ್ಮ ಹೊಸ ಪಕ್ಷವನ್ನು ರಾಜ್ಯದಲ್ಲಿ ಗಟ್ಟಿಗೊಳಿಸೋದರ ಜೊತೆಗೆ ತಮ್ಮ ಹಳೇಯ ಗೆಳೆಯರನ್ನು ಮತ್ತು ಬಿಜೆಪಿ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳವ ಕೆಲಸಕ್ಕೆ ಕೈ ಹಾಕಿದ್ದಾರೆ.

[t4b-ticker]

You May Also Like

More From Author

+ There are no comments

Add yours