ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣಗೆ ಶಾಕ್ ಸಂಸದ ಸ್ಥಾನದಿಂದ ಅನರ್ಹ ಆಗಿದ್ದೇಕೆ.

 

ಬೆಂಗಳೂರು : ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ಅವ್ರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದೆ.

ಪ್ರಜ್ವಲ್ ರೇವಣ್ಣ ಅವ್ರು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್’ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಎ.ಮಂಜು, ವಕೀಲ ದೇವರಾಜೇಗೌಡ ಅಕ್ಷೇಪ ವ್ಯಕ್ತಪಡಿಸಿದ್ದು, ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಸಧ್ಯ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ರೇವಣ್ಣ ಅವ್ರ ಆಯ್ಕೆಯನ್ನ ಅಸಿಂಧುಗೊಳಿಸಿದೆ. ಈ ಮೂಲಕ ಪ್ರಜ್ವಲ್ ಅವ್ರ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಅಂದ್ಹಾಗೆ, ಸಧ್ಯ ರೇವಣ್ಣ ಪರ ವಕೀಲರು ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ, ಸುಪ್ರೀಂಕೋರ್ಟ್’ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ನಡುವೆ, ಪರಜಿತ ಅಭ್ಯರ್ಥಿ ಅರಕಲಗೂಡು ಮಂಜು ಅವರು ಪ್ರಜ್ವಲ್ ರೇವಣ್ಣ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದರು. 2019ರಲ್ಲಿ ನಡೆದ ಲೋಕಸಭಾ ಚುನಾವಣೆ ವೇಳೆ ನಾಮಪತ್ರ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಹೀಗಾಗಿ ಪ್ರಜ್ವಲ್ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಕೋರ್ಟ್, ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಇಂದು (ಸೆಪ್ಟೆಂಬರ್ 1) ಆದೇಶ ಹೊರಡಿಸಿದೆ. ಸದ್ಯ, ಪ್ರಜ್ವರ್ ಪರ ವಕೀಲರು ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ.

[t4b-ticker]

You May Also Like

More From Author

+ There are no comments

Add yours