ಸ್ವಯಂ ಉದ್ಯೋಗಕ್ಕೆ ಮಹಿಳೆಯರಿಗೆ ಧನಶ್ರೀ ಯೋಜನೆಯಡಿ ಅರ್ಜಿ ಆಹ್ವಾನ

 

 

 

 

2020-21ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಧನಶ್ರೀ ಯೋಜನೆಯಡಿ, ಹೆಚ್‍ಐವಿ ಸೋಂಕಿತ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ನಿಗಮದಿಂದ ನೇರವಾಗಿ ರೂ.25,000/-ಗಳ ಸಾಲ ಮತ್ತು ರೂ.25,000/- ಸಹಾಯಧನ ಒಟ್ಟು ರೂ.50,000/-ಗಳ ಆರ್ಥಿಕ ಸೌಲಭ್ಯ ನೀಡಲಾಗುವುದು.
 ಚಿತ್ರದುರ್ಗ ಜಿಲ್ಲೆಗೆ ಭೌತಿಕ 08 ಗುರಿ ನಿಗದಿಪಡಿಸಲಾಗಿದ್ದು, ಈ ಯೋಜನೆಯಡಿ ಸೌಲಭ್ಯ ಪಡೆಯಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ನಿಬಂಧನೆಗಳು: ಅರ್ಜಿ ಸಲ್ಲಿಸುವವರ ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು. ಅರ್ಜಿದಾರಳು ಹೆಚ್‍ಐವಿ ಸೋಂಕು ಇರುವ ಸಂಬಂಧ ಐಸಿಟಿಸಿ, ಪಿಪಿಟಿಸಿಟಿ ಕೇಂದ್ರಗಳಿಂದ ಪಡೆದ ವೈದ್ಯಕೀಯ ದೃಢೀಕರಣ ಪತ್ರ ಸಲ್ಲಿಸುವುದು. ಅರ್ಜಿದಾರರು ಆಯ್ಕೆ ಮಾಡಿಕೊಂಡ ಆದಾಯೋತ್ಪನ್ನ ಚಟುವಟಿಕೆಯ ಯೋಜನಾವರದಿ ಸಲ್ಲಿಸಬೇಕು. ಅರ್ಜಿದಾರರು ರಾಷ್ಟ್ರೀಕೃತ ಬ್ಯಾಂಕ್ ಖಾತೆಯನ್ನು ಹೊಂದಿದ್ದು, ಚಾಲ್ತಿಯಲ್ಲಿರಬೇಕು ಮತ್ತು  ಆಧಾರ್ ಸಂಖ್ಯೆ ಬ್ಯಾಂಕಿಗೆ ಜೋಡಣೆಯಾಗಿರಬೇಕು. ಅರ್ಜಿದಾರಳು ಯಾವುದೇ ಆರ್ಥಿಕ ಸಂಸ್ಥೆ, ಬ್ಯಾಂಕ್‍ಗಳಲ್ಲಿ ಸುಸ್ಥಿರದಾರರಾಗಿರಬಾರದು ಎನ್ನುವುದು ಕಡ್ಡಾಯವಾಗಿರುತ್ತದೆ. ಅರ್ಜಿದಾರಳು ಖಾತೆ ಹೊಂದಿರುವ ಬ್ಯಾಂಕಿನಲ್ಲಿ ಸಾಲ ಪಡೆದಿಲ್ಲ ಎಂಬ ಬಗ್ಗೆ ದೃಢೀಕರಣ ಪತ್ರ ಸಲ್ಲಿಸುವುದು. ಅರ್ಜಿದಾರಳು ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಅರ್ಜಿದಾರಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.
ಈ ನಿಬಂಧನೆಗಳಿಗೆ ಒಳಪಟ್ಟು ಅರ್ಜಿ ಸಲ್ಲಿಸುವವರು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅರ್ಹ ದಾಖಲೆಗಳೊಂದಿಗೆ ಅಕ್ಟೋಬರ್ 23ರ ಸಂಜೆ 5.30ರೊಳಗಾಗಿ ಅಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಚಿತ್ರದುರ್ಗ-08194-235958, ಚಳ್ಳಕೆರೆ-08195-250291, ಹೊಳಲ್ಕೆರೆ-08191-275250, ಹೊಸದುರ್ಗ-08199-230212, ಹಿರಿಯೂರು-08193-263512, ಮೊಳಕಾಲ್ಮುರು-08198-229565 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದ

 

 

[t4b-ticker]

You May Also Like

More From Author

+ There are no comments

Add yours