ಗಂಡನ ಮನೆಯಲ್ಲಿ ವರದಕ್ಷಣೆ ಕಿರುಕುಳ ಮಹಿಳೆ ಆತ್ಮಹತ್ಯೆ

 

ಮೊಳಕಾಲ್ಮುರು🙁Molakalmuru) ಯುವತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ತಡರಾತ್ರಿ ತಾಲ್ಲೂಕಿನ ಕೊಂಡ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಳನ್ನು ಅದೇ ಗ್ರಾಮದ ಎಂ.ಟಿ. ಸುಮಲತಾ (29) ಎಂದು ಗುರುತಿಸಲಾಗಿದ್ದು, ಸ್ಥಳೀಯ ಖಾಸಗಿ ಕಣ್ಣಿನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ಇಬ್ಬರಿಗೆ ಕೋವಿಡ್ ದೃಢ

ಸುಮಲತಾ ಅವರನ್ನು 2022 ರ ಮೇ 19 ರಂದು ಚಳ್ಳಕೆರೆ ತಾಲ್ಲೂಕಿನ ಬೇಡರೆಡ್ಡಿಹಳ್ಳಿಯ ನಾಗೇಶ್ ಎಂಬುವವರಿಗೆ ಮದುವೆ ಮಾಡಿಕೊಡಲಾಗಿತ್ತು. ವರದಕ್ಷಣೆ
ಸೇರಿದಂತೆ ಕೆಲ ವಿಚಾರಗಳಿಗೆ ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿದ್ದರು. ಇದರಿಂದ ನೊಂದ ಸುಮಲತಾ ತವರು ಮನೆಯಲ್ಲಿ ಬಂದು ನೆಲೆಸಿದ್ದಳು ಎಂದು ಮೃತಳ
ತಾಯಿ ಸ್ವಪ್ನ ಅವರು ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಭಾರಿ ತಹಶೀಲ್ದಾರ್ ರೆಹನ್ ಪಾಷಾ, ಡಿವೈಎಸ್ ಪಿ ರಾಜಣ್ಣ ಭೇಟಿ ನೀಡಿ ಪರಿಶೀಲಿಸಿದರು. ಮೊಳಕಾಲ್ಮುರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ ಐ
ಪಾಂಡುರಂಗಪ್ಪ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours