ಮಹಿಳೆಯರ ಸ್ವಯಂ ರಾಜಕೀಯ ಅಧಿಕಾರದ ಚಲಾಯಿಸಬೇಕು:ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.8:
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಅನುದಾನ. ಇದರ ಪರಿಣಾಮವಾಗಿ ಅನೇಕ ಮಹಿಳೆಯರು ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಆಗಿದ್ದಾರೆ. ಆದರೆ ಇಲ್ಲಿ ಮಹಿಳೆಯರು ಅಧಿಕಾರ ಚಲಾಯಿಸುವ ಬದಲು ಅವರ ಗಂಡಂದಿರು ಅಧಿಕಾರ ಚಲಾಯಿಸುತ್ತಾರೆ ಇದು ಬದಲಾಗಬೇಕು. ಮಹಿಳೆಯರು ರಾಜಕೀಯ ಅಧಿಕಾರ ಚಲಾಯಿಸಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.

ನಗರದ ತರಾಸು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಆಧುನಿಕ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಎನ್.ಆರ್.ಎಲ್.ಎಂ-ಸಂಜೀವಿನಿ ಸಂಸ್ಥೆಯಲ್ಲಿ ಬುಧವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು.
ಮತ್ತು ವಿಧಾನಸಭೆ ಚುನಾವಣೆಯಲ್ಲೂ ಕೂಡ ಮಹಿಳೆಯರಿಗೆ ಶೇ.33 ಲೋಕಸಭಾ ಮೀಸಲಾತಿಗೆ ಎಂಬ ಬೇಡಿಕೆ ಬಹುದಿನಗಳಿಂದ ಪ್ರಚಲಿತದಲ್ಲಿದೆ. ಈ ಬೇಡಿಕೆ ಇದೆವಿಗೂ ಖಚಿತವಿಲ್ಲ. ಮುಂದಿನ ದಿನಗಳಲ್ಲಿ ರಾಜಕೀಯ ಸ್ಥಿತಿಗತಿಗಳು ಬದಲಾಗಬಹುದು. ಮಹಿಳೆಯರು ತಮಗೆ ನೀಡಿರುವ ರಾಜಕೀಯ ಅಧಿಕಾರವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವ ಸಾಮಥ್ರ್ಯಗಳಿಸಿ ಸಮಾಜಕ್ಕೆ ಸಮಾನತೆಯನ್ನು ಸಾಧಿಸಬೇಕು ಎಂದು ಹೇಳಿದರು.
ಪ್ರಜಾಪ್ರಭುತ್ವಕ್ಕೆ ಮಾದರಿ ಎನಿಸಿದ ಅಮೇರಿಕಾದ ದೇಶದ ಚುನಾವಣೆಯಲ್ಲಿ ಇದುವರೆವಿಗೂ ಒಬ್ಬ ಮಹಿಳೆ ಅಧ್ಯಕ್ಷೆಯಾಗಿ ಆಯ್ಕೆಯಾಗಿಲ್ಲ. ಆದರೆ ಶ್ರೀಲಂಕಾ, ಭಾರತ, ಪಾಕಿಸ್ತಾನ, ಬಾಂಗ್ಲಾ ಸೇರಿದಂತೆ ಏμÁಯ ದೇಶಗಳಲ್ಲಿ ಮಹಿಳೆಯರು ಪ್ರಧಾನ ಮಂತ್ರಿಯಾಗಿ ಅಧಿಕಾರ ಅಲಂಕರಿಸಿದ್ದಾರೆ. ಭಾರತದಲ್ಲಿ ವಿಶೇಷವಾಗಿ ಮಹಿಳೆಯರು ಎಲ್ಲಾ ರಂಗದಲ್ಲಿ ಭಾಗವಹಿಸುತ್ತಿದ್ದಾರೆ. ಸರ್ಕಾರ ಮಹಿಳೆಯರು ಮತ್ತು ಮಹಿಳಾ ಸಂಘಟನೆಯ ಪೆÇ್ರೀತ್ಸಾಹ ನೀಡುತ್ತಿದೆ. ಬಹು ದಿನಗಳ ಹಿಂದೆ ಹೆಣ್ಣುಮಗು ಜನಿಸಿದರೆ ಬೇಸರ ಪಡುವ ಸಂಗತಿ ಇತ್ತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ‘ಬೇಟಿ ಬಚಾವೋ ಬೇಟಿ ಪಡವೋ’ ಎಂಬ ಯೋಜನೆ ಜಾರಿಗೆ ತಂದರು. ಜನನ ಮುನ್ನವೇ ಹೆಣ್ಣು ಮಗುವಿನ ರಕ್ಷಣೆಗೆ ಕಾನೂನು ರೂಪಿಸಲಾಗಿದೆ. ಇದರ ಫಲವಾಗಿ ದೇಶದ ಲಿಂಗಾನುಪಾತದಲ್ಲಿ ಸ್ತ್ರೀಯರ ಪ್ರಮಾಣ ಹೆಚ್ಚಾಗಿರುತ್ತದೆ. ಸರ್ಕಾರದ ಯೋಜನೆಗಳನ್ನು ಮಹಿಳಾ ಅಡಿಯಲ್ಲಿ. ಇದಕ್ಕೆ ಮುಖ್ಯ ಕಾರಣ ಮಹಿಳೆಯರು ಇದನ್ನು ಸರಿಯದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳುತ್ತಾರೆ ಎಂಬುದಾಗಿದೆ.
ಹೆಣ್ಣು ಮಕ್ಕಳ ರಕ್ಷಣೆಗಾಗಿ ಈ ಹಿಂದೆ ಭಾಗ್ಯ ಲಕ್ಷ್ಮೀ ಯೋಜನೆ ಜಾರಿಗೆ ತರಲಾಗಿದೆ. ಸದ್ಯ ದುಡಿಯುವ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡಲಾಗಿದೆ. ಮಹಿಳೆಯುರು ಜಿಲ್ಲಾ ಮಹಿಳಾ ಸಂಘಟನೆಗಳು ಹಾಗೂ ಸಹಕಾರಿ ಸಂಘಗಳು ಮುತುವರ್ಜಿಯಿಂದ ನಡೆಸಿಕೊಂಡು ಹೋಗುತ್ತಾರೆ. ಇದರಿಂದ ಮಹಿಳಾ ಸಂಘಗಳಿಗೆ ಬ್ಯಾಂಕುಗಳು ಸಾಲ ಸೌಲಭ್ಯ ನೀಡುತ್ತವೆ. ಗ್ರಾಮೀಣ ಬ್ಯಾಂಕ್‌ಗಳಲ್ಲಿ ಮಹಿಳಾ ಸಂಘಗಳಿಂದ ಠೇವಣಿ ಇಡಲಾಗುತ್ತಿದೆ. ಬ್ಯಾಂಕ್‌ಗಳಲ್ಲಿ ಹಣ ಹೆಚ್ಚಾಗಿ ಸುಲಲಿತವಾಗಿ ಕಾರ್ಯನಿರ್ವಹಿಸಲು ಸಹಾಯವಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಮಹಿಳೆಯರಾಗಿ ಜನಿಸಲು ಪುಣ್ಯ ಮಾಡಬೇಕು. ಜನ್ಮನೀಡುವ ಶಕ್ತಿಯನ್ನು ಪ್ರಕೃತಿ ಮಹಿಳೆಯರಿಗೆ ನೀಡಿದೆ. ಮಹಿಳೆಯರು ಯಾವುದೇ ಸಂದರ್ಭ ಹಾಗೂ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವ ಶಕ್ತಿಯನ್ನು ಹೊಂದಿದೆ. ಮಹಿಳೆಯರನ್ನು ಅಡುಗೆ ಮನೆಗೆ ಸೀಮತಗೊಳಿಸಬಾರದು. ಅವರು ಇತರ ವಿಷಯಗಳಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಬೇಕು. ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ನಾನು ಪಡೆದ ತಿಂಗಳ ಗರ್ಭಿಣಿ ಇದ್ದ ಸಂದರ್ಭದಲ್ಲಿ ಲೋಕಸೇವಾ ಆಯೋಗದ ಪರೀಕ್ಷೆ ಬರೆದು ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾದೆ. ಸಾಧನೆ ಮಾಡಲು ಮಹಿಳೆಯರಿಗೆ ಯಾವುದು ಅಡ್ಡಿಯಾಗುವುದಿಲ್ಲ. ನಿರ್ಣಯ ತೆಗದುಕೊಳ್ಳುವ ಸಾಮಾಥ್ರ್ಯ ಮಹಿಳೆಯರಿಗೆ ಇದೆ. ಇದನ್ನು ಎಲ್ಲರೂ ಒಪ್ಪಬೇಕು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ಮಾತನಾಡಿ, ಕೃಷಿಯಲ್ಲಿ ಮಹಿಳೆಯರ ಪಾತ್ರ ಅಗಾಧವಾದುದು. ಗ್ರಾಮೀಣ ಭಾಗದ ಶೇ.80ರಷ್ಟು ಮಹಿಳೆಯರು ಕೃಷಿಯಲ್ಲಿದ್ದಾರೆ. ಕೃಷಿಯಲ್ಲಿನ ಕಠಿಣ ಕೆಲಸಗಳನ್ನು ಮಹಿಳೆಯರು ನಿರ್ವಹಿಸುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮಹಿಳೆಯರಲ್ಲಿ ನಿಷ್ಠೆ, ಆತ್ಮವಿಶ್ವಾಸ, ಸ್ವಾಭಿಮಾನ ಇದೆ. ಮಹಿಳಾ ಸ್ವ ಸಹಾಯ ಸಂಘಗಳಿಗೆ ಬ್ಯಾಂಕ್‌ಗಳು ಆರ್ಥಿಕವಾಗಿ ಸಹಾಯ ಮಾಡುತ್ತವೆ.
ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಕಸ ವಿಂಗಡಣೆಯ ಜವಾಬ್ದಾರಿ ನೀಡುವುದರ ಜೊತೆಗೆ ಮಹಿಳೆಯರಿಗೆ ಕಸ ವಿಂಗಡಣೆಯ ವಾಹನ ಚಾಲಕರಾಗಿ ಕಾರ್ಯನಿರ್ವಹಿಸಲು ತರಬೇತಿ ನೀಡುತ್ತಿದೆ. 97 ಮಹಿಳೆಯರು ತರಬೇತಿ ಪಡೆದಿದ್ದು, ಇನ್ನೂ 31 ಮಹಿಳೆಯರು ತರಬೇತಿ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸುಮಾರು 74 ಮಹಿಳೆಯರು ಕಸ ವಿಂಗಡಣೆಯ ವಾಹನ ಚಾಲಕರಾಗಿ ಕಾರ್ಯನಿರ್ವಹಣೆ ನಡೆಸುತ್ತಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳಾ ದಿನಾಚರಣೆಯ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆಯನ್ನು ಸಂಭ್ರಮಿಸುವ ದಿನವಾಗಿದೆ. 1910 ಕ್ಲಾರಾ ಜಟ್ ಮಹಿಳಾ ದಿನಾಚರಣೆಗೆ ಅಡಿಪಾಯ ಹಾಕಿದರು. 1975 ರಲ್ಲಿ ವಿಶ್ವ ಸಂಸ್ಥೆಯಿಂದ ಅಧಿಕೃತವಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದೆ. ಈ ಬಾರಿ ಧ್ಯೇಯ ವ್ಯಾಖ್ಯೆ “ಲಿಂಗಸಮಾನತೆಗಾಗಿ ನವೀನತೆ ಹಾಗೂ ತಂತ್ರಜ್ಞಾನ” ಎಂಬುದಾಗಿದೆ. ನವೀನತೆ ಹಾಗೂ ಕ್ಷೇತ್ರದ ಕ್ಷೇತ್ರದ ಇμÉೂಟೂ ಮುಂದುವರೆದರೂ ಈ ಕ್ಷೇತ್ರದಲ್ಲಿ ಮಹಿಳೆಯರ ಪ್ರಮಾಣ ಶೇ22ರಷ್ಟು ಇದೆ. ಈ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಾಧನೆ ಮಾಡಲು ಪ್ರೇರಣೆ ನೀಡಬೇಕಾಗಿದೆ.
ಇದೇ ಸಂದರ್ಭದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಹಾಗೂ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಸನ್ಮಾನಿಸಲಾಯಿತು. ಉತ್ತಮ ತೋರಿದ ಗ್ರಾಮ ಪಂಚಾಯತಿ ಮಹಿಳಾ ಸಾಧನೆ ಒಕ್ಕೂಟಗಳಿಗೆ ಪೆÇ್ರೀತ್ಸಾಹ ಧನ ನೀಡಲಾಯಿತು. ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ನಾಮ ನಿರ್ದೇಶನ ಸದಸ್ಯೆ ರೇಖಾ, ಎನ್‌ಆರ್‌ಎಂಎಲ್ ಯೋಜನಾ ನಿರ್ದೇಶಕ ಕೆ.ಎನ್.ಮಹಾಂತೇಶಪ್ಪ, ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಕೊಲ್ಲಿ ಲಕ್ಷ್ಮೀ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಡಿ.ಕೆ.ಶೀಲಾ, ಬಾಲಮಂಡಳಿ ಸದಸ್ಯೆ ಸುಮನ ಅಂಗಡಿ ಸೇರಿದಂತೆ ಇತರರು ಇದ್ದರು.======

[t4b-ticker]

You May Also Like

More From Author

+ There are no comments

Add yours